37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

ಬೆಳ್ತಂಗಡಿ :ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಸಂಜೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸದಿಂದ ಬೆಂಕಿ ವೇಗವಾಗಿ ವ್ಯಾಪಿಸುತ್ತಿದೆ.

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಮಾರ್ಗವಾದ ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಶೇಷವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದ ಗುಡ್ಡ ಪ್ರದೇಶದಲ್ಲಿ ಮಲಯಮಾರುತ ಪರಿಸರದಲ್ಲಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಗುಡ್ಡ ಪ್ರದೇಶವಾಗಿರುವುದರಿಂದ ವಾಹನ ಸಂಚಾರ ಹಾಗೂ ಅಗತ್ಯ ಸಲಕರಣೆಗಳ ಬಳಕೆ ಕಷ್ಟಕರವಾಗಿದ್ದು, ಕಾರ್ಯಾಚರಣೆಗೆ ಸವಾಲು ಎದುರಾಗಿದೆ. ಪಶ್ಚಿಮ ಘಟ್ಟಗಳ ಜೀವವೈವಿಧ್ಯ ಕ್ಕೆ ಪ್ರಸಿದ್ಧ ಈ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸಿರುವುದು ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಬೆಂಕಿ ನಿಯಂತ್ರಣಕ್ಕೆ ಇಲಾಖೆ ತೀವ್ರ ಪ್ರಯತ್ನ ಮುಂದುವರಿಸಿದೆ.

Related posts

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!