25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ರಥೋತ್ಸವದ ಪ್ರಯುಕ್ತ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅರ್ಪಿಸುವ 16ನೇ ವರ್ಷದ ಸಾಂಸ್ಕೃತಿಕ ವೈಭವ, ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಫೆ.19ರಂದು ಬೆಳ್ತಂಗಡಿ ಸಂತೆಕಟ್ಟೆ ಮಾರಿಗುಡಿ ಮೈದಾನದಲ್ಲಿ ನಡೆಯಿತು.

ಧರ್ಮ ಸಾರಥಿ ಡಾ. ಪ್ರದೀಪ್ ನಾವೂರು, ಯಕ್ಷಗಾನ ಹಿರಿಯ ಕಲಾವಿದ ಕೊಳ್ತಿಗೆ ನಾರಾಯಣ ಗೌಡ, ಚಲನಚಿತ್ರ ಛಾಯಾಗ್ರಾಹಕ ಸಂತೋಷ್ ಆಚಾರ್ಯ ಗುಂಪಲಾಜೆ ರವರನ್ನು ಸುವರ್ಣ ರಂಗ ಸಮ್ಮಾನ್ 2026 ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಶ್ರೀ ಗುರುದೇವ ವಿವಿದೋದ್ದೇಶ ಸೇವಾ ಸಹಕಾರಿ ಸಂಘದ ನಿರ್ದೇಶಕಿ ಸುಜಿತಾ ವಿ. ಬಂಗೇರ, ಭುಜಬಲಿ ಧರ್ಮಸ್ಥಳ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ್ ಬಿ., ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್ ನಾಯಕ್ ಸುದ್ದಿ ಬಿಡುಗಡೆ ವ್ಯವಸ್ಥಾಪಕ ಮಂಜುನಾಥ ರೈ, ಶ್ರೀಮತಿ ಬೇಬಿ ಸುವರ್ಣ, ಬಳ್ಳಮಂಜ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಹರ್ಷ ಸಂಪಿಗೆತ್ತಾಯ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಶಶಿಧರ್ ಕಲ್ಮಂಜ, ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸಾಯಿಸುಮ, ಪತ್ರಕರ್ತ ಮನೋಹರ್ ಬಳಂಜ, ಜಾರಪ್ಪ ಪೂಜಾರಿ, ಗಣೇಶ್ ಬಿ ಶಿರ್ಲಾಲು, ತಾ‌.ಪಂ ಮ್ಯಾನೇಜರ್ ಪ್ರಶಾಂತ್ ಡಿ ಬಳಂಜ, ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ಪ್ರದೀಪ್ ಶೆಟ್ಟಿ, ಜಯರಾಜ್, ಪ್ರಭಾಕರ್, ಸುವರ್ಣ ಆರ್ಕೇಡ್ ಮಾಲಕ ನಾಣ್ಯಪ್ಪ ಪೂಜಾರಿ, ಸಂತೋಷ್ ಸುವರ್ಣ ಮಂಗಳೂರು, ಪ್ರಸನ್ನ ಆಚಾರ್ಯ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲು ಸಂಗೀತ ರಸಮಂಜರಿ ನಡೆಯಿತು.

Related posts

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya
error: Content is protected !!