ಉಜಿರೆ : ಮಂಗಳೂರಿನ ಸಂತ ಅಲೋಷಿಯಸ್ ಡೀಮ್ಡ್ ಯುನಿವರ್ಸಿಟಿಯ ಹಿಂದಿ ವಿಭಾಗವು ಆಯೋಜಿಸಿದ ‘ಪ್ರೇರಣಾ 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 33 ವಿದ್ಯಾರ್ಥಿಗಳ ತಂಡವು ಏಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಉತ್ಸವದಲ್ಲಿ ರಾಷ್ಟ್ರ ಮಟ್ಟದ ಚಾಂಪಿಯನ್ಸ್ ಗಳಾಗಿ ಹೊರ ಹೊಮ್ಮಿದ್ದಾರೆ.
ಹಲವು ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವ ಮೂಲಕ ಚಾಂಪಿಯನ್ ಗಳಾಗಿ ಪ್ರಶಸ್ತಿಯನ್ನು ಸ್ವೀಕರಿಸುವ ಜೊತೆಗೆ 5000 ನಗದು ಬಹುಮಾನವನ್ನು ಸ್ವೀಕರಿಸಿದರು. ಎಸ್.ಡಿ.ಎಂ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎಸ್ ಎಸ್.ಡಿ.ಎಂ ತಂಡದ ನೇತೃತ್ವವನ್ನು ವಹಿಸಿದ್ದರು.
ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಸಂಸ್ಥೆಯ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಅಭಿನಂದಿಸಿದರು.
ಪ್ರಶಸ್ತಿಗಳ ವಿವರ :
ರಾಂಪ್ ವಾಕ್ ವಿಭಾಗದಲ್ಲಿ ಪ್ರಥಮ ಬಹುಮಾನ ಸ್ಥಾನ ಪಡೆದು ಇದರಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ದ್ವೀತಿಯ ವರ್ಷದ ಬಿಎಸ್ ಸಿ ವಿದ್ಯಾರ್ಥಿನಿ ಸೃಷ್ಟಿ, ತೃತೀಯ ವರ್ಷದ ಬಿಎಸ್ ಸಿ ವಿದ್ಯಾರ್ಥಿಗಳಾದ ಮೌಲ್ಯ ಎಸ್ , ಜ್ಯೋತಿಕಾ , ವಿಜಿತಾ ಪಿ.ಎಸ್, ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿನಿ ಹರ್ಷಿತಾ ಜಿ ವೈ , ಕಾವ್ಯ, ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿ ಮಾದವ ದಾಸ್ , ಶಿವಪ್ರಸಾದ್, ಸ್ಟೆನಿ ಜೋಸೆಫ್, ರಾಕೇಶ್ ರೈ ಭಾಗವಹಿಸಿದ್ದರು. ರಸ ಪ್ರಶ್ನೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಇದರಲ್ಲಿ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಾದ ವರ್ಷಿಣಿ ಎಲ್ ಹಾಗು ಯಶಸ್ ಪವಾರ್ ಭಾಗವಹಿಸಿರುತ್ತಾರೆ. ಹರ್ಡ್ ಸೆಲ್ ಸ್ಪರ್ಧೆಯಲ್ಲಿ ಬಿಎಸ್ ಸಿ ತೃತೀಯ ವರ್ಷದ ನಿಖಿತಾ ಶೆಟ್ಟಿ, ಧನುಷ್ ಪಿ ಮತು ಲಿಖಿತಾ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಪೋಯೆಟ್ರಿ ರೈಟಿಂಗ್ ಸ್ಪರ್ಧೆಯಲ್ಲಿ ತೃತೀಯ ಬಿಎಸ್ ಸಿ ವಿದ್ಯಾರ್ಥಿನಿ ಇಂಚರಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.











