ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾ. 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಲಾಯಿಲ, ನಾವೂರು, ಬಂದಾರು, ನಾವರ ಗ್ರಾಮದಲ್ಲಿ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಸದಸ್ಯ, ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಪ್ರಸ್ತಾವಿಕವಾಗಿ ಮಾತನಾಡುತ್ತಾ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ಗ್ರಾಮದ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಜಾತ್ರೋತ್ಸವದ ಸಂಚಾಲಕರಾದ ಶೈಲೇಶ್ ಆರ್ ಜೆ, ಗೆಜ್ಜೆ ಗಿರಿ ಗ್ರಾಮ ಸಮಿತಿ ಅಧ್ಯಕ್ಷ ಸಂದೀಪ್ ಕುಮಾರ್ ದರ್ಖಾಸು, ಕಾರ್ಯದರ್ಶಿ ಜಯಂತಿ ಆರಾಧ್ಯ, ಲಾಯಿಲ ವಲಯ ಸಂಚಾಲಕರಾದ ಚಂದ್ರಶೇಖರ ಪರಾರಿ ಇಂದಬೆಟ್ಟು, ಉಪಸ್ಥಿತರಿದ್ದರು.

Related posts

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಸಿರೋ ಮಲಬಾರ್ ಮಾತೃವೇದಿ ವತಿಯಿಂದ ಪಡಂಗಡಿ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಕ್ಕೆ ಸಹಾಯಧನ ವಿತರಣೆ

Suddi Udaya

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಆ.24: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಂದಾರು ಹಾಗೂ ಮೊಗ್ರು ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
error: Content is protected !!