ಬೆಳ್ತಂಗಡಿ: ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚಿಸುತ್ತಿರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಚಿನ್ನ ಮೌಲ್ಯಮಾಪಕರ ವಿಕಾಸ ಸಮಿತಿ ಬೆಳ್ತಂಗಡಿ ವತಿಯಿಂದ ಫೆ. 21 ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕು ಗುರುಸೇವಾ ಪರಿಷತ್ ಅಧ್ಯಕ್ಷ ಪ್ರಕಾಶ್ ಪುರೋಹಿತ್ ವೇಣೂರು ಅವರ ನೇತೃತ್ವದಲ್ಲಿ ಶಾಸಕರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಸಮಿತಿಯು, ನಕಲಿ ಚಿನ್ನದ ಹಾವಳಿಯಿಂದ ಆಗುತ್ತಿರುವ ವಂಚನೆಗಳ ಬಗ್ಗೆ ಗಮನ ಸೆಳೆಯಿತು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಸೂಕ್ತ ಮಾರ್ಗದರ್ಶನ ಹಾಗೂ ಕ್ರಮದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.











