ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದಲ್ಲಿ ಪ್ರಗತಿ ಬಂಧು, ಜ್ಞಾನ ವಿಕಾಸ, ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಮುಂಡಾಜೆ ವಲಯ ಮಂಜುಶ್ರೀ ಭಜನಾ ಮಂಡಳಿ ಮಂಜುಶ್ರೀನಗರ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಂಡಾಜೆ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ ಫೆ.22 ರಂದು ಮುಂಡಾಜೆ ಮಂಜುಶ್ರೀ ಭಜನಾ ಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ನಾರಾಯಣ ಶೆಟ್ಟಿ ಮುಂಡಾಜೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಭಜನಾ ಪರಿಷತ್ ನ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ಭಜನಾ ಪರಿಷತ್ ನ ಜಿಲ್ಲಾ ಸಂಯೋಜಕ ಸಂತೋಷ್ ಅಳಿಯೂರು , ವಲಯ ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಕಜೆ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರವಿರಾಜ್ ಚಾರ್ಮಾಡಿ ಉಪಸ್ಥಿತರಿದ್ದರು.

ಮೇಲ್ವಿಚಾರಕರಾದ ಜನಾರ್ದನ್, ಸೇವಾಪ್ರತಿನಿಧಿಗಳಾದ ಲೀಲಾವತಿ ,ಸರಿತಾ ಪ್ರವೀಣ್, ಒಕ್ಕೂಟದ ಅಧ್ಯಕ್ಷೆ ಶಕುಂತಳಾ ಸತೀಶ್ ನಾಯ್ಕ ಉಪಸ್ಥಿತರಿದ್ದರು.

ರೇವತಿ ದಿನೇಶ್ ಆಚಾರ್ಯ ಸ್ವಾಗತಿಸಿ, ಸದಾನಂದ ಬಿ. ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು. ರಂಜಿನಿ ಧನ್ಯವಾದವಿತ್ತರು. ಕಾರ್ಯದರ್ಶಿ ಉಮೇಶ್ ಆಚಾರ್ಯ , ಪದಾಧಿಕಾರಿಗಳಾದ ಉಮೇಶ್ ಪೂಜಾರಿ, ಪ್ರಮೋದ್, ಚಂದ್ರಶೇಖರ ಗೌಡ, ಗುಲಾಬಿ, ಪೂರ್ಣಿಮಾ, ಪ್ರೀತಿ ಸಹಕರಿಸಿದರು. ಸತ್ಯನಾರಾಯಣ ಹೊಳ್ಳ ಪೂಜೆಯನ್ನು ನೆರವೇರಿಸಿದರು.

Related posts

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya
error: Content is protected !!