ಮುಂಡಾಜೆ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯು ಮುಂಡಾಜೆ ಗ್ರಾಮ ಪಂಚಾಯತ್ ಪ್ರಾಂಗಣದಲ್ಲಿ ನಡೆಯಿತು.
ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಹಾಗೂ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಸುಲೈಮಾನ್ ಬೆಳಾಲು ಅಣಬೆ ಕೃಷಿ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು. ನಾಗೇಶ್ ತೋಟಗಾರಿಕಾ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ವಿಧಾನದ ಬಗ್ಗೆ ಮಾಹಿತಿ ನೀಡಿದರು ಹಾಗೂ ಮಣ್ಣು ಮಾದರಿಯ ಮಹತ್ವ ತಿಳಿಸಿದರು.

ಉಜಿರೆ ಗ್ರಾಮದ ಕೃಷಿ ಸಖಿ ಪ್ರಾಸ್ತಾವಿಕವಾಗಿ ಮಾತನಾಡಿ ರೈತ ತರಬೇತಿಯ ಉದ್ದೇಶಗಳು ವೈಜ್ಞಾನಿಕವಾಗಿ ಕೃಷಿ ಮಾಡುವ ವಿಧಾನ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು.
ತರಬೇತಿ ಕೇಂದ್ರದ ಎಡಿಎ ಮಾತನಾಡಿ ರೈತರು ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು ಎಲ್‌ಸಿಆರ್‌ಪಿ ಪುಷ್ಪಾವತಿ ಸ್ವಾಗತಿಸಿದರು. ಎಂಬಿಕೆ ಮೀನಾ ಧನ್ಯವಾದ ನೀಡಿದರು











