ಉಜಿರೆ: ಸ್ವರಲಹರಿಯಲ್ಲಿ ಮೂಡಿಬಂದ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ ದೇವರು” ಭಕ್ತಿಗೀತೆ ಫೆ.23 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಗೀತೆಯನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು..
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್, ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಕೆ. ಮೋಹನ್ ಕುಮಾರ್, ಭಕ್ತಿಗೀತೆ ರಚಿಸಿರುವ ದಿನೇಶ್ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.











