ವೇಣೂರು : ವೇಣೂರು ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ. 24 ರಂದು ನೂತನ ಬಸ್ ನಿಲ್ದಾಣದ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಾರ್ಗದರ್ಶಿಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಗ್ರಾಮ ಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ್ ಎನ್., ಪಂಚಾಯತ್ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಪ್ರಕಾಶ್ ಎಸ್.ಸ್ವಾಗತಿಸಿದರು. ಲೆಕ್ಕ ಸಹಾಯಕ ರಾಜು ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ನಾರ್ಣಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವನಜ, ಸಿಬ್ಬಂದಿ ವರ್ಗದವರು ಸಹಕರಿಸಿದರು.











