September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

ಪುದುವೆಟ್ಟು : ಪುದುವೆಟ್ಟು ಗ್ರಾಮದ ನಿಡ್ವಾಳ ಬಸದಿಯಲ್ಲಿ ಭಾನುವಾರ ಕೇವಲಜ್ಞಾನ ಕಲ್ಯಾಣ, ಸಮವಸರಣ ಪೂಜೆ, ಭವ್ಯ ಅಗ್ರೋಧಕ ಮೆರವಣಿಗೆ ಬಳಿಕ ಸಹಸ್ರಫಣಿ ಪಾರ್ಶ್ವನಾಥ ಸ್ವಾಮಿ ಮೂರ್ತಿಗೆ 1008 ಕಲಶಗಳಿಂದ ಅಭಿಷೇಕ ಹಾಗೂ ಮಹಾಮಂಗಲಾರತಿಯೊಂದಿಗೆ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನಗೊಂಡಿತು.

ಪೂಜ್ಯ ಏಲಾಚಾರ್ಯ ಪ್ರಸಂಗ ಸಾಗರ ಮುನಿಮಹಾರಾಜರು ಮತ್ತು ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳು ನಡೆದವು.
ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಉಪದೇಶಾಮೃತ ನೀಡುವ ಧರ್ಮಸಭೆಗೆ ಸಮವಸರಣ ಎನ್ನುತ್ತಾರೆ. ಇಲ್ಲಿ ಸಕಲ ಜೀವಿಗಳಿಗೂ ಧರ್ಮೋಪದೇಶ ಕೇಳುವ ಅವಕಾಶವಿದೆ. ಜೈನರ ಶ್ರದ್ಧಾಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ.

ಬೆಳ್ತಂಗಡಿ ಬಸದಿಯ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಜಯರಾಜ ಇಂದ್ರರು ಮತ್ತು ಧರಣೇಂದ್ರ ಕುಮಾರ್ ಹಾಗೂ ಸ್ಥಳ ಪುರೋಹಿತರಾದ ಶ್ರೀಕೀರ್ತಿ ಇಂದ್ರರು, ಬೈಲಂಗಡಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.
ಧರ್ಮಸ್ಥಳದ ಕೋಟ್ಯಣ್ಣ ಬಂಟರಾದ ಸುರೇಂದ್ರಕುಮಾರ್ ಜೈನ್, ಪಂಚಕಲ್ಯಾಣ ಮಹೋತ್ಸವ ಸಮಿತಿಯ ಅಧ್ಯಕ್ಷ ಡಿ. ಧನಕೀರ್ತಿ ಆರಿಗ, ಉಪಾಧ್ಯಕ್ಷ ಮಹಾವೀರ ಜೈನ್, ಪ್ರಧಾನ ಕಾರ್ಯದರ್ಶಿ ಚಂದ್ರನಾಥ ಜೈನ್, ಸಂಚಾಲಕ ಜಯವರ್ಮ ಕಾಜವ ಮತ್ತು ಕೋಶಾಧಿಕಾರಿ ಅಜಯ್ ಕುಮಾರ್ ಹಾಗೂ ಸದಸ್ಯರು ಮತ್ತು ಊರಿನ ಶ್ರಾವಕ-ಶ್ರಾವಕಿಯರು ಉಪಸ್ಥಿತರಿದ್ದು ಸಮಾರಂಭದ ಯಶಸ್ವಿಗೆ ಸಹಕರಿಸಿದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!