ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ವತಿಯಿಂದ ಸೋಣಂದೂರು ಶಾಲೆಯ ಅಭಿವೃದ್ಧಿಯ ಸಲುವಾಗಿ ೬ನೇ ವರ್ಷದ ಕಬಡ್ಡಿ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜನೆಗೊಳಿಸಿ ಅದರಿಂದ ಉಳಿಕೆಯಾದ ಹಣದಲ್ಲಿ ಸೋಣಂದೂರು ಶಾಲೆಗೆ ರೂ.೩೫,೦೦೦ ಮೊತ್ತದ ಲ್ಯಾಪ್‌ಟಾಪ್ ಕೊಡುಗೆಯಾಗಿ ಶಾಲೆಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಇದರ ಅಧ್ಯಕ್ಷರು, ಪದಾಧಿಕಾರಿಗಳು. ಸದಸ್ಯರು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಅಧ್ಯಾಪಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.











