23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

ಗುರಿಪಳ್ಳ: ಉಜಿರೆ ಗುರಿಪಳ್ಳ ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಊರವರ ಮನವಿಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ವಿಶೇಷ ಮುತುವರ್ಜಿಯಿಂದ ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಇವರು ಇಲಾಖೆಯ ವತಿಯಿಂದ ರೂ. 2.5ಕೋಟಿ ಅನುದಾನ ಬಿಡುಗಡೆಗೊಳಿಸಿರುತ್ತಾರೆ.

ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಸರಕಾರದ ಜೊತೆ ನಿರಂತರವಾಗಿ ಸಂಪರ್ಕ ಸಾದಿಸಿ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಹಾಗೂ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸಿ ಊರವರು ಹಾಕಿರುವ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿರುತ್ತಾರೆ ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ವಿಕೃತ ಮನಸ್ಸಿನ ದುಷ್ಟ ಶಕ್ತಿಗಳ ಈ ಕೃತ್ಯ ಖಂಡನಾರ್ಹ ಈ ಬಗ್ಗೆ ಊರವರ ಪರವಾಗಿ ಪೊಲೀಸ್ ಇಲಾಖೆಗೆ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದೆಂದು ಸೇತುವೆ ನಿರ್ಮಾಣಕ್ಕೆ ಶ್ರಮವಹಿಸಿದ ಸ್ಥಳೀಯರು ಅಭಿಪ್ರಾಯ ವ್ಯಕ್ತ ಪಡಿಸಿರುತ್ತಾರೆ.

Related posts

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!