July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ.

ಫೆಬ್ರವರಿ 26, 2026ರ ರಾತ್ರಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ವೇಳೆ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆಯಾಗಿದೆ. ಅಲ್ಲದೆ ಸಮೀಪದಲ್ಲಿದ್ದ ಆಟೋರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್‌ಗಳು ದೊರೆತಿದ್ದು, ಒಟ್ಟು 56 ಕೆಜಿ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ, ಆರೋಪಿಯಾಗಿರುವ ಹೆಚ್. ಅಬ್ದುಲ್ ರಹಿಮಾನ್ ಅವರ ಜಾನುವಾರು ವಧೆಗೆ ಬಳಸಲಾಗಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya
error: Content is protected !!