23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ಉಜಿರೆ: “ವಿದ್ಯಾರ್ಥಿಗಳಲ್ಲಿ ಬರೀ ಜ್ಞಾನ ಸಾಲದು, ಜ್ಞಾನದ ಜೊತೆ ಕೌಶಲ್ಯಗಳ ಅಗತ್ಯತೆ ಇದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಟಿ.ಎನ್ ಕೇಶವ್ ವಿದ್ಯಾರ್ಥಿಗಳೊಂದಿಗೆ ವಿಷಯ ವಿವರಿಸಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಿ.ವಿ ರಾಮನ್ ಅವರ ಸಂಶೋಧನೆಯಾದ ‘ರಾಮನ್ ಪರಿಣಾಮ’ಕ್ಕೆ ನೋಬೆಲ್ ಪ್ರಶಸ್ತಿ ದೊರೆತ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಿದ ವಿಜ್ಞಾನ ದಿನದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್, ವಿಜ್ಞಾನ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಜಿತಿನ್ ವಂದಿಸಿ, ಸಿದ್ಧಾಂತ್ ನಿರೂಪಿಸಿದರು.

Related posts

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya
error: Content is protected !!