22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಂಗ್ಲಿಷ್ ವಿಭಾಗವು ಯುಜಿ ಮತ್ತು ಪಿಜಿ ಅಧ್ಯಯನ ಹಾಗೂ ಸಂಶೋಧನಾ ವಿಭಾಗ, ಸಂಶೋಧನೆ ಮತ್ತು ಅಭಿವೃದ್ಧಿ ಕೋಶ, ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಭಾಗಿತ್ವದಲ್ಲಿ ಇಂಗ್ಲಿಷ್ ಮತ್ತು ಸಮಾಜಶಾಸ್ತ್ರ ವಿಷಯಗಳ ‘ಸಮಾಜದ ಪುನರ್ಲೇಖನ: 21ನೇ ಶತಮಾನದಲ್ಲಿ ಭಾಷೆ, ಸಾಹಿತ್ಯ ಮತ್ತು ಸಾಮಾಜಿಕ ಪರಿವರ್ತನೆ’ ಶಿರ್ಷಿಕೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಿದ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಲಾಯಿತು.

ವಿಚಾರ ಸಂಕಿರಣವನ್ನು ಗೋವಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅತಿಥಿ ಪ್ರಾಧ್ಯಾಪಕರು ಹಾಗೂ ಮಣಿಪಾಲದ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ನ ಸಹಾಯಕ ಪ್ರಾಧ್ಯಾಪಕ ಪ್ರೊ. ಕೆ. ಶ್ರೀಪಾದ್ ಭಟ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಈ ನೆಲದ ಭಾಷೆ, ಸಂಸ್ಕೃತಿ, ಸಾಹಿತ್ಯ ಮತ್ತು ಆಚರಣೆಗಳಿಗೆ ತನ್ನದೇ ಆದ ಮಹತ್ವ ಮತ್ತು ಶಕ್ತಿ ಇದೆ. ವಿದ್ಯಾರ್ಥಿಗಳು ವಿಚಾರವಂತರಾಗಬೇಕು. ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅರ್ಥೈಸಿಕೊಳ್ಳುವುದರ ಜೊತೆಗೆ ಸಮಾಜದ ತೊಡಕು ಮತ್ತು ಸವಾಲುಗಳನ್ನು ಸರಿದೂಗಿಸಲು ಪ್ರಯತ್ನಿಸಬೇಕು. ವಿನೂತನ ಆಲೋಚನೆಗಳು ಸಾಹಿತ್ಯಿಕ ದೃಷ್ಟಿಕೋನವನ್ನು ವಿಸ್ತರಿಸುತ್ತಾ ಸಮಾಜದ ಪರಿವರ್ತನೆಯಲ್ಲಿ ಸಕ್ರೀಯ ರಾಗಬೇಕು. ಇಂತಹ ವಿಚಾರ ಸಂಕಿರಣಗಳು ಹಲವು ಹೊಸತನಗಳಿಗೆ ವೇದಿಕೆಯಾಗಲಿದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಮಾತನಾಡಿ, ಶೈಕ್ಷಣಿಕ ಬೆಳವಣಿಗೆ ಎಂದರೆ ಕೇವಲ ಉಪನ್ಯಾಸಕರ ಬೋಧನೆ ಮತ್ತು ವಿದ್ಯಾರ್ಥಿಗಳ ಜ್ಞಾನಾರ್ಜನೆ ಅಲ್ಲ. ಶೈಕ್ಷಣಿಕ ಸಂಸ್ಥೆಗಳಲ್ಲಿ ಇಂದು ಸಂಶೋಧನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದು ಹೊಸ ಜ್ಞಾನ‌ ಪರಂಪರೆಯನ್ನು ಪರಿಚಯಿಸುವುದರ ಜೊತೆಗೆ ಬದುಕಿನ ಮೌಲ್ಯವನ್ನು ಹೆಚ್ಚಿಸುತ್ತದೆ. ಅನೇಕ ಸವಾಲು ಮಾತು ಪ್ರಶ್ನೆಗಳಿಗೆ ಪರಿಹಾರ ಸೂಚಿಸಿ ಹೊಸ ಆಲೋಚನೆಗಳನ್ನು ಬೆಳೆಸುತ್ತದೆ. ಪ್ರಸ್ತುತ ವಿದ್ಯಮಾನಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ಸಂಶೋಧನೆಗೆ ವಿಶೇಷ ಪ್ರಾಮುಖ್ಯತೆ ಇದೆ. ವಿದ್ಯಾರ್ಥಿಗಳ ಭಾಷಾ ಆಯ್ಕೆಯಲ್ಲಿ ಆಸಕ್ತಿ ತೋರಬೇಕು. ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಲು ಶಿಕ್ಷಕರು ಪ್ರಯತ್ನಿಸಬೇಕು. ವಿದ್ಯಾರ್ಥಿಗಳಲ್ಲಿ ವೈಚಾರಿಕ ಪ್ರಬುದ್ಧತೆಯನ್ನು ಹೆಚ್ಚಿಸಲು ಕಾಲೇಜಿನಲ್ಲಿ ನಿರಂತರವಾಗಿ ವಿಚಾರ ಸಂಕಿರಣದಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದು ಕೊಳ್ಳಬೇಕು ಎಂದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಈ 21ನೇ ಶತಮಾನದ Rewriting Society: Language, Literature and Social Transformation’ ಎಂಬ ಶೀರ್ಷಿಕೆಯ ಪುಸ್ತಕವನ್ನು ಅತಿಥಿಗಳಾದ ವಕೀಲ ಹಾಗೂ ಶಿವಮೊಗ್ಗದ Deccan Herald ಮತ್ತು The Hindu ಪತ್ರಿಕೆಯ ಮಾಜಿ ಪ್ರಿನ್ಸಿಪಲ್ ಕರಸ್ಪಾಂಡೆಂಟ್ ವೀರೇಂದ್ರ ಪಿ.ಎಮ್ ಬಿಡುಗಡೆ ಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ, ಇಂದಿನ ಸಮಕಾಲೀನ ಜಗತ್ತಿನಲ್ಲಿ ಭಾಷೆ ಮತ್ತು ಸಾಹಿತ್ಯವು ಕೇವಲ ಅಧ್ಯಯನ ವಿಷಯಗಳಲ್ಲ; ಅವು ಚಿಂತನೆಯನ್ನು ರೂಪಿಸುವ, ದೃಷ್ಟಿಕೋನಗಳನ್ನು ಪ್ರಭಾವಿಸುವ ಮತ್ತು ಬದಲಾವಣೆಗೆ ಪ್ರೇರೇಪಿಸುವ ಶಕ್ತಿಶಾಲಿ ಸಾಧನಗಳಾಗಿವೆ. ಜಾಗತೀಕರಣ, ಡಿಜಿಟಲ್ ಸಂವಹನ ಮತ್ತು ಬದಲಾಗುತ್ತಿರುವ ಸಾಂಸ್ಕೃತಿಕ ಪರಿಕಲ್ಪನೆಗಳ ಪರಿಣಾಮವಾಗಿ ಸಮಾಜಗಳು ನಿರಂತರವಾಗಿ ರೂಪಾಂತರಗೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ, ಮಾನವ ಅನುಭವವನ್ನು ಅರ್ಥೈಸುವ ಮತ್ತು ಪರಿವರ್ತಿಸುವಲ್ಲಿ ಸಾಹಿತ್ಯ ಹಾಗೂ ಭಾಷಾ ಸಂವಾದದ ಪಾತ್ರ ಅತ್ಯಂತ ಮಹತ್ವಪೂರ್ಣವಾಗುತ್ತಿದೆ. ಈ ಪುಸ್ತಕವು ಇಂತಹ ವಿಚಾರಗಳನ್ನು ಆಳವಾದ ಶೈಕ್ಷಣಿಕ ದೃಷ್ಟಿ ಮತ್ತು ಬೌದ್ಧಿಕ ಸಂವೇದನಾಶೀಲತೆಯನ್ನು ಒಳಗೊಂಡಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೂ ಆದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಷ್ಟ್ರೀಯ ವಿಚಾರ ಸಂಕಿರಣ ಕುರಿತಾಗಿ ಕಳುಹಿಸಿದ ಪತ್ರವನ್ನು ಉಪನ್ಯಾಸಕ ದೀಪಕ್ ಶರ್ಮಾ ವಾಚಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ ಅತಿಥಿಗಳನ್ನು ಪ್ರೋ. ವಿಶ್ವನಾಥ್ ಪಿ ಮತ್ತು ಸ್ನಾತಕೋತ್ತರ ಕೇಂದ್ರದ ಡೀನ್ ಸೌಮ್ಯ ಕುಮಾರಿ ಶಾಲು ಹೊದಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ದೇಶದ ತಮಿಳುನಾಡು, ಕೇರಳ ,ಗೋವಾ, ಕರ್ನಾಟಕ ಹಾಗು ನಾನ ರಾಜ್ಯದ ವಿಚಾರ ತಜ್ಞರು ಭಾಗವಹಿಸುವುದರೊಂದಿಗೆ ದಕ್ಷಿಣ ಭಾರತದ ಅನೇಕ ರಾಜ್ಯಗಳಿಂದ 100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಪ್ರತಿನಿಧಿಗಳು ವಿವಿಧ ವಿಷಯಗಳ ಕುರಿತು ವಿಚಾರ ಮಂಡನೆ ಮಾಡಲಿರುವರು.

ಕಾರ್ಯಕ್ರಮದ ವೇದಿಕೆಯಲ್ಲಿ ಕೇರಳದ ಗೋವಿಂದ ಪೈ ಮೋಮೊರಿಯಲ್ ಸರ್ಕಾರಿ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಮತ್ತು ಉಪನ್ಯಾಸಕಿ ಡಾ. ಎಐ ಮುನೀರ ಜೆ, ಮಂಗಳೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ನಿವೃತ್ತ ಮುಖ್ಯಸ್ಥೆ ಡಾ. ರಾಜ ಲಕ್ಷ್ಮಿ ಎನ್.ಕೆ , ಕಾಲೇಜಿನ IQAC ಸಂಯೋಜಕರಾದ ಜಿ.ಆರ್. ಭಟ್, ಪಿಜಿ ಸ್ನಾತಕೋತ್ತರ ಕೇಂದ್ರದ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ. ಮಂಜುಶ್ರೀ ಆರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಪದವಿ ಕಾಲೇಜಿನ ಇಂಗ್ಲಿಷ್ ಭಾಷಾ ಉಪನ್ಯಾಸಕ ದೀಪಕ್ ಶರ್ಮಾ ನಿರೂಪಿಸಿ , ವಿಚಾರ ಸಂಕಿರಣದ ಸಂಯೋಜಕಿ ಡಾ. ಮಂಜುಶ್ರೀ ಆರ್ ವಂದಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಬದನಾಜೆ ಶಾಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ “ಯಶೋ-ವಿಜಯ” ಬದುಕು-ನೆನಪು-ಸ್ಮರಣೆ: ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

Suddi Udaya

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya
error: Content is protected !!