32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿ ಇಸ್ರೋದಲ್ಲಿ ಹಿರಿಯ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿರುವ ಪಿ.ವಾಸುದೇವರಾವ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳಿಗೆ ವಿಜ್ಞಾನ ದಿನಾಚರಣೆಯ ಕುರಿತು ಮಾಹಿತಿ ನೀಡಿದರು. ವಿಜ್ಞಾನದ ಅಗತ್ಯ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವದ ಅಗತ್ಯ, ರಾಕೆಟ್‌ಗಳ ಕಾರ್ಯವೈಖರಿ, ಬಳಿಕ ಇಸ್ರೋ ಎಂದರೇನು ಅದರ ಕಾರ್ಯವೈಖರಿಗಳ ಬಗ್ಗೆ ಮಾಹಿತಿಯನ್ನು ವಿವಿಧ ಉದಾಹರಣೆಗಳ ಮೂಲಕ ವಿವರಿಸಿದರು. ಅವರು ವಿಜ್ಞಾನಕ್ಕೆ ನೀಡಿದ ಸೇವೆಯನ್ನು ಮನಗಂಡು ಸನ್ಮಾನಿಸಲಾಯಿತು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನವನ್ನು ಸಹ ನೀಡಲಾಯಿತು. ಗ್ರಂಥಾಲಯದಲ್ಲಿ ವಿಜ್ಞಾನ ಪುಸ್ತಕಗಳ ಪ್ರದರ್ಶನ ಮಾಡಲಾಯಿತು..

ವಿದ್ಯಾರ್ಥಿನಿ ಆರಾಧ್ಯ ಪಿ ಜೋಷಿ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ ಸ್ವಾಗತಿಸಿ , ವಿದ್ಯಾರ್ಥಿನಿ ವೈಭವಿ ಅತಿಥಿಗಳ ಪರಿಚಯ ಮಾಡಿದರು. ಶಿಕ್ಷಕಿ ಅನುಷಾ ಸ್ಪರ್ಧೆಯಲ್ಲಿ ವಿಜೇತರಾದವರ ಪಟ್ಟಿಯನ್ನು ಓದಿದರು. ವಿದ್ಯಾರ್ಥಿನಿ ಸಮೀಕ್ಷಾ ವಂದಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!