ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ‘ ವಿಜ್ಞಾನ ಸಿಂಚನ – 2026’ ಭಾರತೀಯ ಜ್ಞಾನ ಪರಂಪರೆ ವಿಷಯದಡಿಯಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ಅಂತರ್ ಕಾಲೇಜುಗಳ ರಾಜ್ಯಮಟ್ಟದ ಸ್ಪರ್ಧಾ ಉತ್ಸವಕ್ಕೆ ಫೆ.28ರಂದು ಚಾಲನೆ ನೀಡಲಾಯಿತು.

ಪುತ್ತೂರಿನ ಎಸ್.ಆರ್.ಕೆ ಲ್ಯಾಡರ್ಸ್ ಮಾಲಕ ಕೇಶವ್ ಅಮೈ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಶಿಕ್ಷಣದ ಜೊತೆಗೆ ಕೌಶಲ್ಯಧಾರಿತ ಬದುಕಿನ ಶಿಕ್ಷಣವನ್ನು ಕಲಿಯಬೇಕು. ಕೌಶಲ್ಯಗಳು ನಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವುದ ಜೊತೆಗೆ ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ವಿದ್ಯಾರ್ಥಿ ಜೀವನ ಹಲವು ಪ್ರಯತ್ನ ಮತ್ತು ಪ್ರಯೋಗಳಿಗೆ ಬಹುದೊಡ್ಡ ವೇದಿಕೆ. ಇಲ್ಲಿ ನಡೆಯುವ ಸರಿ ತಪ್ಪುಗಳು ನಮಗೆ ಭವಿಷ್ಯದ ಬದುಕಿಗೆ ಪಾಠವಾಗಬೇಕು. ಇತ್ತೀಚಿನ ದಿನಗಳಲ್ಲಿ ಪರಸ್ಪರ ಸಂವಹನ, ಸಂಬಂಧ ಕುಂಠಿತವಾಗುತ್ತಿದೆ. ಮಾನವ ಸಂಬಂಧ ಬೆಸೆಯಲು ಹಾಗು ವಿದ್ಯಾರ್ಥಿಗಳು ಸಾಮಾಜಿಕವಾಗಿ ತೆರೆದುಕೊಳ್ಳಲು ಸಮೂಹ ಸಂಪರ್ಕ ಮತ್ತು ಸಂವಹನದ ಅತ್ಯವಶ್ಯಕ ಎಂದು ದೀಪದ ಬೆಳಕು ಹೇಗೆ ಮೇಲ್ಮುಖವಾಗಿ ಉರಿದು ಪ್ರಜ್ವಲಿಸುತ್ತದೆಯೋ ವಿದ್ಯಾರ್ಥಿಗಳ ಬದುಕು ಹಾಗೆ ಸದಾ ಪ್ರಜ್ವಲಿಸಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಮಾತನಾಡಿ, ಈ ಸಮಾಜದ ಸಾಧಕರ ಜೀವನ ಸದಾ ನಮಗೆಲ್ಲರಿಗೂ ಪ್ರೇರಣೆ. ಈ ಪ್ರೇರಣೆ ವಿದ್ಯಾರ್ಥಿಗಳಲ್ಲೂ ಜಾಗರೂಕವಾಗಬೇಕೆಂದು ಕಾಲೇಜಿನ ಆಡಳಿತ ಮಂಡಳಿ ಸದಾ ಸಾಧಕರು ಮತ್ತು ಗಣ್ಯ ವ್ಯಕ್ತಿಗಳನ್ನು ಕಾಲೇಜಿನ ವೇದಿಕೆಗೆ ಕರೆತಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡಲು ಅನುವು ಮಾಡಿಕೊಡುತ್ತದೆ. ಸಾಧಕರ ವ್ಯಕ್ತಿತ್ವ ನಮ್ಮ ವ್ಯಕ್ತಿತ್ವವನ್ನೂ ರೂಪಿಸಲಿ , ವಿದ್ಯಾರ್ಥಿಗಳ ಪ್ರತಿ ಕ್ಷೇತ್ರದಲ್ಲೂ ಆಸಕ್ತಿದಾಯಕರಾಗಿ ಕಾರ್ಯೋನ್ಮುಖವಾಗಲಿ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ಮತ್ತು ವಿನೂತನ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ವೇದಿಕೆಯಲ್ಲಿ ಬಹುಮಾನಗಳನ್ನು ಅನಾವರಣಗೊಳಿಸಿದರು. ಒಂದು ದಿನದ ರಾಜ್ಯಮಟ್ಟದ ಸ್ಪರ್ಧಾ ಉತ್ಸವದಲ್ಲಿ ವಿದ್ಯಾರ್ಥಿಗಳಿಗೆ ಹತ್ತು ಹಲವು ತಂಡಗಳ ಮತ್ತು ವೈಯಕ್ತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ವಿಜ್ಞಾನ ಸಿಂಚನ -2026 ಪ್ರಶಸ್ತಿಯೊಂದಿಗೆ ವಿಶೇಷವಾಗಿ ನಗದು ಬಹುಮಾನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಬಳಿಕ ವೇದಿಕೆಯಲ್ಲಿ ಅತಿಥಿಗಳನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಶಾಲು ಹೊದಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಚಾರ್ಯೆ ನಂದ ಕುಮಾರಿ, ವಿಜ್ಞಾನ ವಿಭಾಗದ ಡೀನ್ ಡಾ. ಸವೀತಾ, ಜೈವತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಅಭಿಜಿತ್ ಬಡಿಗೇರ, ವಿದ್ಯಾರ್ಥಿ ಸಂಯೋಜಕರಾದ ವರುಣ್, ಗಾನವಿ ಮತ್ತು ಪವನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಕುಲಸಚಿವ ಪ್ರೊ. ಶ್ರೀಧರ್ ಭಟ್, ಪರಿಕ್ಷಾಂಗ ಕುಲಸಚಿವ ಗಣೇಶ್ ನಾಯಕ್, ಐಕ್ಯುಎಸ್ ಸಂಯೋಜಕ ಡಾ. ಗಜಾನನ ಭಟ್, ಸ್ನಾತಕೋತ್ತರ ಕೇಂದ್ರದ ಡೀನ್ ಸೌಮ್ಯ ಕುಮಾರಿ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗಿಯಾಗಿದ್ದರು.

ವಿದ್ಯಾರ್ಥಿಗಳಾದ ರಚನಾ ಮತ್ತು ಜ್ಯೋತಿಕಾ ಕಾರ್ಯಕ್ರಮ ನಿರೂಪಿಸಿ, ಗಾನವಿ ವಂದಿಸಿದರು. ಉಪನ್ಯಾಸಕರಾದ ದೀಕ್ಷಿತ್ ರೈ ಮತ್ತು ಅಭಿಲಾಶ್ ಸಹಕರಿಸಿದರು.

Related posts

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ಧರ್ಮಸ್ಥಳದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ತಾಲೂಕು ಮಟ್ಟದ ಶಟಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!