32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

ಬೆಳ್ತಂಗಡಿ:  ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾರ್ಗದರ್ಶನ ದೊಂದಿಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ. 1 ರಂದು ಚಾಲನೆ ನೀಡಲಾಯಿತು.

ಮಾ.1 ರಂದು ಬೆಳಿಗ್ಗೆ 8 ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಊರ ಹಾಗೂ ಪರವೂರ ಭಕ್ತಭಿಮಾನಿಗಳಿಂದ ಪದ್ಮುಂಜ ಶ್ರೀ ಕಲ್ಕುಡ ದೈವಸ್ಥಾನದಿಂದ ಚೆಂಡೆ -ಘೋಷಗಳ ವೈಭವಯುತ ಮೆರವಣಿಗೆಯೊಂದಿಗೆ ಹಸಿರು ಹೊರಕಾಣಿಕೆ ಸಮರ್ಪಣೆ ನಡೆಯಿತು.

ಮಧ್ಯಾಹ್ನ  ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು ಸಂಜೆ  ಕ್ಷೇತ್ರದ ತಂತ್ರಿಗಳಿಗೆ ಹಾಗೂ ಇತರ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ಸಂಜೆ 6 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಆಚಾರ್ಯಾದಿ ಋತ್ವಿಗ್ವರಣ, ಪ್ರಸಾದಶುದ್ದಿ, ಅಂಕುರಾರೋಪಣ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾಬಲಿ, ಮಹಾಪೂಜೆ, ಪ್ರಸಾದ್ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಚಿದಾನಂದ ರಾವ್ ಕೊಲ್ಲಾಜೆ ಅಧ್ಯಕ್ಷತೆಯಲ್ಲಿ ದೇಗುಲದ  ಕೆಳಭಾಗದಲ್ಲಿರುವ ವೇದಿಕೆಯಲ್ಲಿ ನಡೆಯಿತು.

ಉಪನ್ಯಾಸಕ ಕೇಶವ ಬಂಗೇರ ಧಾರ್ಮಿಕ ಭಾಷಣ ಮಾಡಿದರು.
ಕಟೀಲು ಅನುವಂಶೀಯ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣರು ಉಗ್ರಾಣ ಉದ್ಘಾಟಿಸಿ ಶುಭಾಶಂಸನೆ ನೀಡಿದರು.

ಮೊಗರೋಡಿ ಲಕ್ಷ್ಮೀಶ ಮೇಲಾಂಟ ಕಾರ್ಯಾಲಯ ಉದ್ಘಾಟಿಸಿದರು.

ಸುದರ್ಶನ್ ಕಣಿಯೂರು ಗುತ್ತು,  ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಕಣಿಯೂರು ಶ್ರೀ ಮಾಹಮ್ಮಯಿ ದೇವಸ್ಥಾನದ ಬಾಬು ನಾಯ್ಕ ಮೈಪಾಜೆ,  ಪೆರ್ಲ ಬೈಪಾಡಿ ಶ್ರಿ ಸಿದ್ದಿವಿನಾಯಕ ದೇವಸ್ಥಾನದ ಮೊಕ್ತೇಸರಾದ ಹರೀಶ್ ಕೋಡಿಮಜಲು, ಕಣಿಯೂರು ಶ್ರೀ ಮಹಾವಿಷ್ಣು ಭಜನಾ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕೊರಂಟಾಜೆ, ಗುರುಪ್ರಸಾದ್ ಮಲೆಂಗಲ್ಲು, ಕಣಿಯೂರು ಗ್ರಾ. ಪಂ. ಮಾಜಿ ಅಧ್ಯಕ್ಷೆ ಅರುಣಾ ಎಸ್ ಶೆಟ್ಟಿ, ಬಾಬು ಗೌಡ ಪೊಯ್ಯ ಹೊಸಮನೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೊಗರೋಡಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್ ಮಾರುತಿಪುರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಠ್ಠಲ ಶೆಟ್ಟಿ ಕೊಲ್ಲೆಟ್ಟು ಉಪಸ್ಥಿತರಿದ್ದರು.

ಬ್ರಹ್ಮಕಲಶ ಸಮಿತಿ ಸಂಚಾಲಕಿ ಶಾರಾದ ಆರ್ ರೈ ಸ್ವಾಗತಿಸಿದರು.

ಸಂಜೆ 5-30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya
error: Content is protected !!