37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಸೇವಾ ನಿವೃತ್ತಿ ಹೊಂದುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿಯವರಿಗೆ ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಫೆ.28ರಂದು ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಉಪಪ್ರಾಂಶುಪಾಲರಾದ ಈಶ್ವರಿಯವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಸರಳತೆ, ಕರ್ತವ್ಯ- ನಿಷ್ಠೆ ಎಲ್ಲರಿಗೂ ಮಾದರಿಯಾಗಿದೆ. ತಮ್ಮ ಸುದೀರ್ಘ ಸೇವಾವಧಿಯಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಅವರು ನೀಡಿದ ಕೊಡುಗೆ ಅಪಾರವಾದದ್ದು, ಶಾಲೆಗಳ ಶೈಕ್ಷಣಿಕ ಪ್ರಗತಿ ಮತ್ತು ಶಿಕ್ಷಕರ ವೃತ್ತಿಪರ ಬೆಳವಣಿಗೆಗೆ ಅವರು ಸದಾ ಮಾರ್ಗದರ್ಶನ ನೀಡುತ್ತಿದ್ದರು ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ, ಫಲಪುಷ್ಪದೊಂದಿಗೆ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅವರು ಶಾಲೆಯ ಪ್ರೀತಿ ಮತ್ತು ಗೌರವಕ್ಕೆ ಮನ ತುಂಬಿ ಕೃತಜ್ಞತೆ ಸಲ್ಲಿಸಿದರು. ಶಿಕ್ಷಣ ಮತ್ತು ಸರಿಯಾದ ಜ್ಞಾನ ನಮ್ಮ ಬದುಕನ್ನು ಕಟ್ಟುವುದು. ವಿದ್ಯಾರ್ಥಿಗಳಲ್ಲಿ ಗುರಿ ಸ್ಪಷ್ಟವಾಗಿರಲಿ ಮತ್ತು ಅದನ್ನು ನಿಷ್ಠೆಯಿಂದ ಸಾಧಿಸುವ ಪ್ರಯತ್ನ ಮಾಡಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

ಸಮಾರಂಭದಲ್ಲಿ ಶಾಲೆಯ ಸಹಶಿಕ್ಷಕರು, ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲ ಗೌಡ ಹಾಗೂ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಶಿಕ್ಷಕ ದಿನೇಶ್ ನಿರೂಪಿಸಿ, ವಂದಿಸಿದರು.

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya
error: Content is protected !!