July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ ಮಹಾವಿದ್ಯಾಲಯ, ಉಜಿರೆ ಯ ಎಸ್ ಡಿಎಂ–ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ನೇಮಕಾತಿ ಕೇಂದ್ರದ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವು ಕಾಲೇಜಿನ ಸೆಮಿನಾರ್ ಹಾಲ್–I ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಂತರಾಷ್ಟ್ರೀಯ ಇಂಗ್ಲಿಷ್ ಉಚ್ಚಾರಣಾ ತರಬೇತುದಾರ ಹಾಗೂ ಡ್ಯಾಫೋಡಿಲ್ಸ್ ಟ್ರೈನಿಂಗ್ ಅಕಾಡೆಮಿ, ಬೆಂಗಳೂರಿನ ಸಂಸ್ಥಾಪಕ ಡಾ. ರಮೇಶ್ ಎ. ಉದ್ಘಾಟಿಸಿ ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸಂವಹನ ಕೌಶಲ್ಯದ ಮಹತ್ವವನ್ನು ವಿವರಿಸಿದರು. ಆತ್ಮವಿಶ್ವಾಸ, ಸರಿಯಾದ ಉಚ್ಚಾರಣೆ ಹಾಗೂ ಸ್ಪಷ್ಟ ಅಭಿವ್ಯಕ್ತಿ ವಿದ್ಯಾರ್ಥಿಗಳ ಸಾಧನೆಗೆ ಅತ್ಯಂತ ಮುಖ್ಯವೆಂದು ತಿಳಿಸಿದರು

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಮಗ್ರ ಅರಿವು ಹೊಂದಿ, ಸಮರ್ಪಕ ಯೋಜನೆ ಹಾಗೂ ಮಾರ್ಗದರ್ಶನದೊಂದಿಗೆ ಸಿದ್ಧತೆ ನಡೆಸಬೇಕು ಎಂದು ಸಲಹೆ ನೀಡಿದರು. ಸರ್ಕಾರದ ವಿವಿಧ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್., ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ವಾರ್ಡನ್‌ಗಳಾದ ಲೋಕೇಶ್ ಹಾಗೂ ಚಂದ್ರಪ್ಪ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೂರು ಶೈಕ್ಷಣಿಕ ಅಧಿವೇಶನಗಳು ನಡೆದವು. ಮೊದಲ ಅಧಿವೇಶನದಲ್ಲಿ ಡಾ. ರಮೇಶ್ ಎ. ಅವರು “ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿಗಾಗಿ ಸಂವಹನ ಕೌಶಲ್ಯಗಳು” ವಿಷಯದ ಮೇಲೆ ಉಪನ್ಯಾಸ ನೀಡಿದರು. ಎರಡನೇ ಅಧಿವೇಶನದಲ್ಲಿ ಜೆಸಿಐ ಇಂಡಿಯಾ ರಾಷ್ಟ್ರೀಯ ತರಬೇತುದಾರ ಹಾಗೂ ರಾಮಕುಂಜ ಹೈಸ್ಕೂಲ್, ಬಿಲಿನೆಲೆ ಮುಖ್ಯೋಪಾಧ್ಯಾಯ ಶತೀಶ್ ಭಟ್ ಬಿಲಿನೆಲೆ ಅವರು “ಪರೀಕ್ಷಾ ಒತ್ತಡ ಮತ್ತು ಆತಂಕವನ್ನು ನಿರ್ವಹಿಸುವ ತಂತ್ರಗಳು” ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮೂರನೇ ಅಧಿವೇಶನದಲ್ಲಿ ಮಂಗಳೂರು ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜು ಹಂಪನಕಟ್ಟೆ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ್ ರಾಕೇಶ್ ಡಿ’ಸೋಜಾ ಅವರು “ಸ್ಪರ್ಧಾತ್ಮಕ ಪರೀಕ್ಷೆಗಳ ಅರಿವು ಮತ್ತು ತಯಾರಿ ತಂತ್ರಗಳು” ವಿಷಯವಾಗಿ ಉಪನ್ಯಾಸ ನೀಡಿದರು.


ಕಾರ್ಯಕ್ರಮ ಸಂಯೋಜಕ ಎಸ್‌ಡಿಎಂ ಕಾಲೇಜಿನ ತರಬೇತಿ ಮತ್ತು ನೇಮಕಾತಿ ಅಧಿಕಾರಿ ಡಾ. ನಾಗರಾಜ್ ಪೂಜಾರಿ ಸ್ವಾಗತಿಸಿದರು. ನಿಲಯ ಪಾಲಕ ಪಾಲಕ ಚಂದ್ರಪ್ಪ ವಂದಿಸಿದರು. ಉಪನ್ಯಾಸಕ ದೀಕ್ಷಿತ್ ರೈ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು.

Related posts

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya
error: Content is protected !!