ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.8ರಂದು ನಡೆಯಲಿರುವ 18ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಪೂರ್ವಭಾವಿಯಾಗಿ ವಿವಾಹದ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವಿಧಾ ಸಭಾಂಗಣದಲ್ಲಿ ಮಾ.1ರಂದು ನಡೆಯಿತು.
ಪುಂಜಾಲಕಟ್ಟೆ ಉದ್ಯಮಿ ಗಣೇಶ್ ಮೂಲ್ಯ ಅನಿಲಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ಸಾಮೂಹಿಕ ವಿವಾಹ ಉತ್ತಮ ಕಾರ್ಯವಾಗಿದೆ ಎಂದು ಶುಭ ಹಾರೈಸಿದರು. ಉದ್ಯಮಿ ಹರೀಂದ್ರ ಟಿ.ಪೈ ಶುಭ ಹಾರೈಸಿದರು.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ಬಡ, ಹಿಂದುಳಿದ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ವಿಜೃಂಭಣೆಯಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಉದ್ಯಮಿ ಜಗನ್ನಾಥ ಶೆಟ್ಟಿ ಕೆದ್ದಳಿಕೆ ಅವರು ಮಂಗಳ ವಸ್ತ್ರ ವಿತರಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಉಪ ತಹಶೀಲ್ದಾರ್ ರೋಹಿನಾಥ ಬಟ್ರೋಡಿ, ಪಿಲಾತಬೆಟ್ಟು ಪ್ರಾ.ಕೃ.ಸ. ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಬಿತಾ ದಿನೇಶ್, ಸದಾಶಿವ ಶಾಂತಿ ನಗರ ,ಕಡಬ ಕೋಡಿಂಬಾಳ ಶ್ರೀ ಮಹಾವಿಷ್ಣು ದೇವಸ್ಥಾನದ ಕಾರ್ಯದರ್ಶಿ ಕೇಶವ ಬೇರಿಕೆ, ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಕರ್ಕೇರಾ,ಗುತ್ತಿಗೆದಾರ ಮೋಹನ್ ಶೆಟ್ಟಿ ನರ್ವಲ್ದಡ್ಡ, ಶಿಕ್ಷಕ ಉದಯ ಕುಮಾರ್ ಶೆಟ್ಟಿ ಮೇಲ್ಮನೆ, ಕ್ಲಬ್ ಅಧ್ಯಕ್ಷ ಅಬ್ದುಲ್ ಹಮೀದ್, ಮಾಜಿ ಅಧ್ಯಕ್ಷ ಮಾಧವ ಬಂಗೇರ, ಪ್ರಮುಖರಾದ ಕಾಂತಪ್ಪ ಕರ್ಕೇರಾ, ರತ್ನಾಕರ ಪಿ.ಎಂ.,ಅಮೃತಾ ಎಸ್., ಹರೀಶ್ ನಾಕ್, ರಫೀಕ್ ಆರ್‌ಡಿಎಸ್, ಹೇಮಂತ, ಮತ್ತಿತರರು ಉಪಸ್ಥಿತರಿದ್ದರು.

ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟುಗುತ್ತು ಮತ್ತು ಪ್ರಶಾಂತ್ ಪೂಜಾರಿ ಅವರು ಗುರಿಕಾರರಾಗಿ ಭಾಗವಹಿಸಿ ನಿಶ್ಚಯ ತಾಂಬೂಲ ನೆರವೇರಿಸಿದರು.
ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿದರು. ಪ್ರ.ಕಾರ್ಯದರ್ಶಿ ರಾಜೇಶ್ ಪಿ.ಪುಂಜಾಲಕಟ್ಟೆ ವಂದಿಸಿದರು. ಪುಂಜಾಲಕಟ್ಟೆ ನಾರಾಯಣ ಗುರು ವಸತಿ ಶಾಲೆ ಪ್ರಾಂಶುಪಾಲ ಸಂತೋಷ್ ಸನಿಲ್ ಕಾರ್ಯಕ್ರಮ ನಿರೂಪಿಸಿದರು.











