26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಸ್ಥಳೀಯ ರೈತಾಪಿ ವರ್ಗದ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಈ ಯೋಜನೆಯ ಅಗತ್ಯತೆಯನ್ನು ಮಾನ್ಯ ಸಣ್ಣ ನೀರಾವರಿ ಸಚಿವರ ಗಮನಕ್ಕೆ ತಂದು ಸಮಗ್ರವಾಗಿ ಮನವರಿಕೆ ಮಾಡಲಾಗಿದ್ದು, ಅದರ ಫಲವಾಗಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಲಭಿಸುವುದರ ಜೊತೆಗೆ ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯೂ ಒದಗಲಿದೆ.

ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರಕ್ಕೆ ಹಾಗೂ ವಿಶೇಷ ಸಹಕಾರ ನೀಡಿದ ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Related posts

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

Suddi Udaya
error: Content is protected !!