28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

ಉಜಿರೆ: ಶ್ರೀ ಧರ್ಮಸ್ಠಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್.) ದಲ್ಲಿ ಮಾ.2ರಂದು 2025-26ನೇ ಸಾಲಿನ ಬಿ.ಎಡ್. ತರಗತಿಯ ಪ್ರಾರಂಭೋತ್ಸವ “ದೀಕ್ಷಾನ್ವಯ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿಜ್ಞಾನ ವಿಭಾಗ ಮುಖ್ಯಸ್ಥ ರಾಜೇಶ್ ಕಕ್ರನ್ನಾಯ ಎ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿಕ್ಷಕ ಬೋಧನೆ ಉತ್ತಮವಾಗಿರಬೇಕಾದರೆ ತರಬೇತಿ ಮುಖ್ಯವಾಗಿರುತ್ತದೆ. ಪ್ರತಿಯೊಬ್ಬ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿ ಶಿಕ್ಷಕರಾಗಬೇಕಾದರೆ ಶಿಸ್ತು, ತಾಳ್ಮೆ, ಕ್ರಿಯಾಶೀಲತೆ, ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆ ಹಾಗೂ ಕುಶಲತೆ ಹೊಂದಿರಬೇಕು. ಶಿಕ್ಷಕ ವೃತ್ತಿಯು ಉಳಿದೆಲ್ಲಾ ವೃತ್ತಿಗಳಿಗಿಂತಲೂ ಶ್ರೇಷ್ಠವಾದದ್ದು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ ಮಾತನಾಡಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಸಂಸ್ಕೃತಿ ಮತ್ತು ಶಿಕ್ಷಕ ತರಬೇತಿಯಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ. ಗುಣಮಟ್ಟದ ಶಿಕ್ಷಣ ದೊರಕುವುದಲ್ಲದೇ ಸರ್ವತೋಮುಖ ಕೌಶಲಗಳನ್ನು ಮೈಗೂಡಿಸಿಕೊಳ್ಳಲು ಶಿಕ್ಷಕ ತರಬೇತಿಯ ಅವಶ್ಯಕತೆ ಇದೆ ಎಂದರು.

ವೇದಿಕೆಯಲ್ಲಿ ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ಸಂಯೋಜಕಿ ಅನುಷಾ ಡಿ. ಜೆ. ಹಾಗೂ ವಿದ್ಯಾರ್ಥಿ ನಾಯಕಿ ಸಾಯಿದೃತಿ ಶೆಟ್ಟಿ ಉಪಸ್ಥಿತರಿದ್ದರು.

ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳನ್ನು ಭಾರತದ ನಕಾಶೆಯ ಸುತ್ತಲು ದೀಪ ಬೆಳಗಿಸುವ ಮೂಲಕ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಪೋಷಕರು ಹಾಗೂ ಬಿ.ಎಡ್. ಮತ್ತು ಡಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ವರ್ಷ ಸ್ವಾಗತಿಸಿ, ಯಶಸ್ವಿನಿ ವಂದಿಸಿ, ಎ. ಎಸ್. ಪೂಜಾ ಕಾರ್ಯಕ್ರಮ ನಿರೂಪಿಸಿದರು.

Related posts

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ರಕ್ಷಿತ್ ಶಿವರಾಮ್ ಭೇಟಿ: ಕೋಳಿ ಸಾಕಾಣಿಕೆದಾರರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರದ ಭರವಸೆ ನೀಡಿದ ರಕ್ಷಿತ್ ಶಿವರಾಮ್

Suddi Udaya

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!