26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorizedಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

ಗೇರುಕಟ್ಟೆ: ಕಳಿಯ ಗ್ರಾಮದ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿಯ ಮಹಾಸಭೆಯು ನಡೆದು, ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಭಜನಾ ಮಂಡಳಿಯ ಅಧ್ಯಕ್ಷರಾದ ಸತೀಶ್ ಗೌಡ ಕುಳಾಯಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು.

ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಶುಭೋದಯ ಕುಳಾಯಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುಂದರ ನಾಯ್ಕ್ ಕುಳಾಯಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ನಂದೀಶ್ ಶೆಟ್ಟಿ ಹರ್ಮಾಡಿ , ಕಾರ್ಯದರ್ಶಿಯಾಗಿ ಕೇಶವ ಪೂಜಾರಿ ನೆಲ್ಲಿಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ರವೀಂದ್ರ ಪೂಜಾರಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಪ್ರಧಾನ ಅರ್ಚಕ ದರ್ಣಪ್ಪ ಪೂಜಾರಿ, ಕಳಿಯ ಗ್ರಾ. ಪಂ. ಮಾಜಿ ಅಧ್ಯಕ್ಷ ದಿವಾಕರ ಪೂಜಾರಿ ಮೆದಿನ, ಅಶೋಕ್ ಆಚಾರ್ಯ, ಶಿವರಾಮ್ ಗೌಡ ದಾಸರಬೆಟ್ಟು, ಹಿರಿಯರಾದ ದಾಮೋದರ್ ಶೆಟ್ಟಿ ಹರ್ಮಾಡಿ, ಸುಂದರ ಗೌಡ ಉಬರಡ್ಕ, ಶೇಖರ ಪೂಜಾರಿ ಹಾಗೂ ಭಜನಾ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!