September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

ಬೆಳಾಲು:ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ಬೆಳಾಲು ಗುತ್ತು ಮನೆಯ ಜೀವಂಧರ್ ಕುಮಾರ್ ಜೈನ್ ಮತ್ತು ಡಿ.ಪಿ. ಸದಸ್ಯ ಪ್ರವೀಣ್ ಎಸ್.ಎಲ್. ಇವರ ಸ್ಮರಣಾರ್ಥ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ 11ನೇ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟವು ಮಾ.7ರಂದು ಬೆಳಾಲು ದೊಂಪದಪಲ್ಕೆಯಲ್ಲಿ ನಡೆಯಲಿದೆ.

ಕ್ರೀಡಾಕೂಟದ ಉದ್ಘಾಟನೆಯನ್ನು ಮಾರ್ಗದರ್ಶಕರಾದ ಹೇಮಾವತಿ ಜೀವಂಧರ್‌ ಜೈನ್ ನೆರವೇರಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್‌ ಪೂಂಜ ವಹಿಸಲಿದ್ದಾರೆ.

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಹರೀಶ್ ಆರಿಕೋಡಿ ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಅರಸಿನಮಕ್ಕಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಸಂಜೀವ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ , ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್‌ ಮಾಲಕ ಮೋಹನ್ ಕುಮಾರ್, ಎಕ್ಸೆಲ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್ ಬಿ. ಹಾಗೂ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಡಿಪಿ ಸ್ಫೋರ್ಟ್ಸ್ ಕ್ಲಬ್‌ ಅಧ್ಯಕ್ಷ ದಿನೇಶ್ ಗೌಡ ವಹಿಸಲಿದ್ದಾರೆ. ಅತಿಥಿಗಳಾಗಿ ತಾಲೂಕು ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ ಬನಂದೂರು, ಬೆಳಾಲು ಸೇವಾ ಸಹಕಾರಿ ಬ್ಯಾಂಕ್‌ ಉಪಾಧ್ಯಕ್ಷ ದಿನೇಶ್‌ ಕೋಟ್ಯಾನ್‌ ಹಾಗೂ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!