September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಉಜಿರೆ: ಅಗಸ್ಯ ಇಂಟರ್‌ನ್ಯಾಷನಲ್ ಫೌಂಡೇಶನ್ ಹಾಗೂ ಬೆಂಗಳೂರಿನ ಸಿನೋಪ್ಪಿಸ್ ಸಂಸ್ಥೆಯ ಆಶ್ರಯದಲ್ಲಿ ಇತ್ತೀಚೆಗೆ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅನ್ವೇಷಣಾ-2026 ಪ್ರಾಜೆಕ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಉಜಿರೆಯ ಎಸ್.ಡಿ.ಎಂ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.


ಅನ್ವೇಷಣಾ-2026 ಪ್ರಾಜೆಕ್ಟ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ವಿವಿಧ ಇಂಜಿನಿಯರಿAಗ್ ಕಾಲೇಜು ಗಳಿಂದ ಸುಮಾರು ೬೦೦ಕ್ಕೂ ಹೆಚ್ಚು ನವೀನ ತಾಂತ್ರಿಕ ಪ್ರಾಜೆಕ್ಟ್ ಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅವುಗಳಲ್ಲಿ ೪೫ ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಈ ನಡುವೆ ಉಜಿರೆಯ ಎಸ್.ಡಿ.ಎಂ ಸಂಸ್ಥೆಯ ವಿದ್ಯಾರ್ಥಿಗಳು ತಯಾರಿಸಿದ ಪ್ರಾಜೆಕ್ಟ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದು ವಿಶೇಷವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಯೊಂದಿಗೆ 8000 ನಗದು ಬಹುಮಾನವನ್ನು ನೀಡಿ ಗೌರವಿಸಿದೆ.

ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಾಹನಾ ಬೋಗಾರ್, ಚಂದನಾ, ಅಖಿಲೇಶ್ ಹಾಗು ಉಜಿರೆಯ ಎಸ್.ಡಿ.ಎಂ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾದ ಕಾರ್ತಿಕ್, ರಾಕೇಶ್ ಡಿ.ಆರ್ ಭಾಗವಹಿಸಿದ್ದರು. ಇವರಿಗೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಪದ್ಮ ಪ್ರಸಾದ ಮಾರ್ಗದರ್ಶನ ನೀಡಿರುತ್ತಾರೆ.

ಈ ಸಾಧನೆ ಉಜಿರೆಯ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಗರಿಮೆಯನ್ನು ಹೆಚ್ಚಿದ್ದು, ಶೈಕ್ಷಣಿಕ ಶ್ರೇಷ್ಠತೆ ಹಾಗೂ ಪ್ರಾಯೋಗಿಕ ನವೀನತೆಗೆ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya
error: Content is protected !!