37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

ಕಡಿರುದ್ಯಾವರ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.5ರಂದು ಗ್ರಾ.ಪಂ. ಆಡಳಿತ ಅಧಿಕಾರಿ ಶರ್ಮಿಷ್ಠ ರವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಮಿತ್ತಬಾಗಿಲು ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಾಲ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಮೆಸ್ಕಾಂ, ಕಂದಾಯ, ಪಶು ಸಂಗೋಪನೆ, ಶಿಕ್ಷಣ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿಯನ್ನು ನೀಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರತ್ನಾವತಿ, ಮಾಜಿ ಸದಸ್ಯ ಅಶೋಕ್, ಸುರೇಶ್ ಕೌಡಂಗೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂಚಾಯತ್ ಕಾರ್ಯದರ್ಶಿ ಜನಾರ್ದನ ಅನುಪಾಲನಾ ವರದಿ ವಾಚಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ವಂದಿಸಿದರು. ವಿತೇಶ್ ಕೋಟ್ಯಾನ್ ಜಮಾ ಖರ್ಚು ವಿವರ ಮಂಡಿಸಿದರು

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ರಾಜ್ಯಮಟ್ಟದ ಕರಾಟೆ ಪಂದ್ಯಕೂಟಕಕ್ಕಿಂಜೆಯ ಉಸ್ಮಾನ್ ಆದಿಲ್ ಕುಮಿಟೆ ವಿಭಾಗದಲ್ಲಿ ಪ್ರಥಮ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
error: Content is protected !!