September 6, 2026
ಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್‌ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕವನ್ನು ಪುನರ್ ಸಂಘಟಿಸಲು ಸಮಾಲೋಚನಾ ಸಭೆ ಕರೆಯಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ ಅವರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳನ್ನು ಪುನರ್ ನೇಮಕ ಮಾಡಿ ಕಾರ್ಯ ಪ್ರವೃತ್ತರಾಗಲು ಸಲಹೆ ಸೂಚನೆಗಳನ್ನಿತ್ತರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಅಧ್ಯಕ್ಷೆ ಸಿಹಾನ ಬಿ ಎಂ, ಉಪಾಧ್ಯಕ್ಷೆ ದಾಕ್ಷಾಯಿಣಿ ಎಸ್ ಜಿ, ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಸಂಘಟಕರು ಅಶ್ವಿಜ ಶ್ರೀಧರ್, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ‌ ಅಧ್ಯಕ್ಷ ಶಿವರಾಮ ಕಾಸರಗೋಡು, ಚಿರಂತ್ ಸಚಿನ್ ಶ್ರವಣಬೆಳಗೊಳ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ, 8123716968

Related posts

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya
error: Content is protected !!