September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

ಬೆಳಾಲು: ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್‌ ಗಾಣಿಗೇರವರು ನೇತೃತ್ವದ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಹಣವನ್ನು ಪಣವಾಗಿಟ್ಟುಕೊಂಡು ಹಿಂಸಾತ್ಮಕವಾಗಿ ಕೊಳಿ ಅಂಕ ಜೂಜಾಟ ನಡೆಯುತ್ತಿದ್ದಾಗ ಸ್ಥಳದಲ್ಲಿದ್ದ 7 ಜನರನ್ನು ಹಿಡಿದು ವಿಚಾರಿಸಲಾಗಿ ಕೃಷ್ಣಪ್ಪ ಗೌಡ(60), ರಾಜಪ್ಪ ಗೌಡ(55), ಪ್ರಕಾಶ್(40), ಚಂದಪ್ಪ (45), ಜಯಾನಂದ(38), ರಾಮಣ್ಣ ಗೌಡ(50), ಲಕ್ಷ್ಮಣ ಗೌಡ(45) ಎಂಬವರಾಗಿದ್ದು ಉಳಿದವರು ದಾಳಿ ವೇಳೆ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳದಲ್ಲಿದ್ದ 5 ಕೋಳಿಗಳನ್ನು ಮತ್ತು ಕೋಳಿಗಳ ಕಾಲಿಗೆ ಕಟ್ಟುವ ಬಾಲುಗಳು(ಸಣ್ಣಕತ್ತಿ) 2 ಹಾಗೂ ನಗದು 970 ರೂಪಾಯಿ ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕಲಂ: 87 KP Act AND ಕಲಂ 11(1)(m)(ii), 11(1)(n), . prevention of animals cruelty Act -1960ರಂತೆ ಪ್ರಕರಣ ದಾಖಲಾಗಿದೆ.

Related posts

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya
error: Content is protected !!