September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ 2025ನೇ ಸಾಲಿನ ಗೌರವ ಪ್ರಶಸ್ತಿಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೋಕೇಶ್ವರಿ ವಿನಯಚಂದ್ರ ಅವರನ್ನು ಆಯ್ಕೆ ಮಾಡಿದೆ. ಅರೆಭಾಷಿಕ ಸಂಘಟನಾ ಕ್ಷೇತ್ರದ ಸಾಧನೆಗಾಗಿ ಲೋಕೇಶ್ವರಿ ವಿನಯಚಂದ್ರ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಮಾರ್ಚ್ 14ರಂದು ಮಂಗಳೂರಿನ ಉರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪ್ರಶಸ್ತಿ 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದ ಸಾಧನೆಗಾಗಿ ಅನಂತರಾಜ ಗೌಡ ಪುತ್ತೂರು ಮತ್ತು ಅರೆಭಾಷೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಟ್ರತನ ಲಲಿತ ಅಯ್ಯಣ್ಣ ಮಡಿಕೇರಿ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya
error: Content is protected !!