September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನಲ್ಲಿ ಸಹಕಾರಿ ಭಾರತಿ ವತಿಯಿಂದ ನಡೆದ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಿಗಾಗಿ ನಡೆದ ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿಗಳು ಭಾಗವಹಿಸಿದರು.

ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವದ 100 ಮೀಟರ್ ಓಟದಲ್ಲಿ ಅಳದಂಗಡಿ ಸಿಎ ಬ್ಯಾಂಕಿನ ಅಧ್ಯಕ್ಷರಾದ ರಾಕೇಶ್ ಹೆಗ್ಡೆ ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನವನ್ನು ಅಲಂಕರಿಸಿದ್ದಾರೆ ಹಾಗೂ ವಿವಿಧ ಕ್ರೀಡಾಕೂಟದಲ್ಲಿ ಸಂಘದ ಪದಾಧಿಕಾರಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಸಂಘವು ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ದನ ಪೂಜಾರಿ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ದಿನೇಶ್ ಪಿ.ಕೆ, ಸಿಬ್ಬಂದಿಗಳಾದ ಸತೀಶ್ ಕೆ, ಯತೀಶ್ ಬಳಂಜ, ಪ್ರವೀಣ್ ತೋಟದಪಲ್ಕೆ, ಕಿರಣ್ ಪಿಲ್ಯ, ಸಂತೋಷ್ ಅಳದಂಗಡಿ, ದಿನೇಶ್ ಕುದ್ಯಾಡಿ, ಡಿಕಯ್ಯ ಕುಲಾಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!