March 7, 2026
Uncategorized

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17 ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ. ವಿದ್ಯಾರ್ಥಿ, ಯುವಜನ , ಮಹಿಳಾ, ರೈತರು , ಕೂಲಿಕಾರರ ಪರವಾಗಿರುವ , ದಲಿತರು, ಆದಿವಾಸಿಗಳು , ಹಿಂದುಳಿದ ವರ್ಗಗಳ ಅಭಿವೃದ್ಧಿ ದೃಷ್ಟಿಕೋನದಿಂದ ಕೂಡಿದ ಬಜೆಟ್ ಇದಾಗಿದೆ.

ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಎರಡು ಹೊಸ ಪೋಲಿಸ್ ಠಾಣೆಗಳ ಮಂಜೂರು , ಹಲವು ವರ್ಷಗಳ ಜನರ ಬಹುಮುಖ್ಯ ಬೇಡಿಕೆಯಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜ್ ಗೆ ಪೂರಕವಾಗಿ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ. ಎಸ್ಸಿ/ಎಸ್ಟಿ ಉದ್ಯೋಗಸ್ಥ ಮಹಿಳೆಯರಿಗಾಗಿ ವಸತಿ ನಿಲಯ ಸ್ಥಾಪನೆ ಅಭಿವೃದ್ಧಿ ಹೊಸ ಮೈಲಿಗಲ್ಲು.
ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ , ಸಾಮಾಜಿಕ ದೌರ್ಜನ್ಯಗಳನ್ನು ತಡೆಗಟ್ಟಲು ರೋಹಿತ್ ವೇಮುಲ ಕಾಯಿದೆ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಐತಿಹಾಸಿಕವಾದುದು. ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ , 800 ನೂತನ ಕೆಪಿಎಸ್ ಶಾಲೆಗಳ ಘೋಷಣೆ ಮಾಡಿರುವುದು ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯ ಭಾಗವಾಗಿದೆ. ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವ ಮೂಲಕ ಕರಾವಳಿಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದೆ. ಅಡಿಕೆ ಎಲೆಚುಕ್ಕಿ ರೋಗ , ಬಿಳಿಕೀಟಗಳ ನಿಯಂತ್ರಣಕ್ಕಾಗಿ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಕ್ರಮ ಕೈಗೊಳ್ಳುವ ಮೂಲಕ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ. ಮಾನವ- ವನ್ಯಜೀವಿ ಸಂಘರ್ಷಕ್ಕಾಗಿ ಮಾನವ- ವನ್ಯಜೀವಿ ಸಂರಕ್ಷಣಾ ಕಾರ್ಯತಂತ್ರ ಯೋಜನೆಗಾಗಿ 5 ವರ್ಷಗಳಲ್ಲಿ 150 ಕೋಟಿ ಮೀಸಲು, ರೈತರಿಗೆ 0 ಬಡ್ಡಿದರದಲ್ಲಿ 30,000 ಕೋಟಿ ಕೃಷಿಸಾಲ , ಅರಣ್ಯ/ ಅರಣ್ಯದಂಚಿನಲ್ಲಿ ವಾಸಿಸುವ ವಸತಿರಹಿತ ಕುಟುಂಬಗಳಿಗೆ 4.50 ಲಕ್ಷ ವೆಚ್ಚದ ಮನೆ ನಿರ್ಮಾಣ ಸೇರಿದಂತೆ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿಶಾಲೆ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಸಮಾಜದ ಕಟ್ಟಕಡೆಯ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಮೂಲಕ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ.

Related posts

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya
error: Content is protected !!