22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಸಮಸ್ಯೆ

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35 ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬೆಳ್ತಂಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಅಜರಮಾರು ನಿವಾಸಿ ಹೈಡೋಸ್ ಮಗನಾದ ಕುಖ್ಯಾತ ಸರಣೆ ಕಳ್ಳ ಹಮೀದ್ ಕುಂಞಮೋನು@ ಜಾಫರ್ @ ಹಮೀದ್ @ ಲಾಡಿ ಹಮೀದ್(49) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಮಾಲತೇಶ್ ಅವರ ಸಹಕಾರದೊಂದಿಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬ್ಬಂದಿ ಶಂಕರ್ ಮತ್ತು ಸುದರ್ಶನ್ ಪವರ್ ಅವರು ಮಾ.2 ರಂದು ಬೆಳಗ್ಗೆ 12 ಗಂಟೆಗೆ ಸುಮಾರಿಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಳ್ಳನ ಇತಿಹಾಸ ಆರೋಪಿ ವಿರುದ್ಧ ಒಟ್ಟು ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 35 ಸರಣೆ ಕಳ್ಳತನ ಪ್ರಕರಣ ದಾಖಲಾಗಿದ್ದು. ಇದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 22 ಕಡೆಗಳಲ್ಲಿ ಬಂಧನದ ವಾರಂಟ್ ಹೊರಡಿಸಲಾಗಿತ್ತು. ಈತನ ಮೇಲೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 5 ಪ್ರಕರಣ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ವೇಣೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಶೃಂಗೇರಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬೇಲೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಹರಿಹರಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕೊಡಗು ಜಿಲ್ಲೆಯ ಬಾಗಮಂಡಲ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾಸರಗೋಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.

Related posts

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಗುಂಡ್ಯ ಬಳಿ ಟ್ರಕ್ ಕಾರಿಗೆ – ಡಿಕ್ಕಿ ಗೇರುಕಟ್ಟೆ ಪರಿಸರದ ಐವರಿಗೆ ಗಾಯ:ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!