ಪ್ರಮುಖ ಸುದ್ದಿ

ಯುವಕರು, ಕೃಷಿಕರು, ರೈತರು, ದುಡಿವ ವರ್ಗಕ್ಕೆ ಶಕ್ತಿ ತುಂಬಿದ ರಾಜ್ಯ ಬಜೆಟ್: ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ: ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ದಾಖಲೆಯ ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ಅವರು ರೈತರು, ಕೃಷಿಕರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಆದ್ಯತೆ ನೀಡುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಜನಪರ ಬಜೆಟ್ ಮಂಡಿಸಿದ್ದಾರೆ. ಅದರಲ್ಲೂ ನಿರುದ್ಯೋಗ ಎದುರಿಸುತ್ತಿದ್ದ ಯುವಜನತೆಗೆ 56,432 ಸರಕಾರಿ ಹುದ್ದೆ ಭರ್ತಿ ಮಾಡುವ ಬಗ್ಗೆ ಸಿಎಂ ಘೋಷಣೆ ಮಾಡಿದ್ದು, ಐದು ವರ್ಷಗಳ ವಯೋಮಿತಿ ಸಡಿಲಿಕೆ ಮಾಡುವ ಮೂಲಕ ಹಿಂದಿನ ಯಾವುದೇ ಸರ್ಕಾರಗಳು ಮಾಡದ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ಎಲ್ಲಾ ಜಿಲ್ಲೆಗಳು, ವರ್ಗಗಳಿಗೂ ಸಮಾನ ಪ್ರಾಮುಖ್ಯತೆ ನೀಡಿ ಅಭಿವೃದ್ಧಿಯೊಂದೇ ತಮ್ಮ ಗುರಿ ಎಂಬುದನ್ನು ನಿರೂಪಿಸಿದ್ದಾರೆ.

ಉದ್ಯೋಗಸ್ಥ ಎಸ್.ಸಿ-ಎಸ್.ಟಿ ಮಹಿಳೆಯರಿಗೆ ಮಂಗಳೂರು, ಮೈಸೂರು, ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುವುದಾಗಿ ತಿಳಿಸಿರುವುದು ಮುಂದಿನ ದಿನಗಳಲ್ಲಿ ತುಂಬಾ ಅನುಕೂಲವಾಗಲಿದೆ. ಅದೇ ರೀತಿ ಆರ್‌ಟಿಇ ಅಡಿ ಪ್ರವೇಶ ಪಡೆದ ಎಸ್‌ಸಿ, ಎಸ್‌ಟಿ 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು 19 ಕೋಟಿ ರೂ. ಘೋಷಣೆ ಮಾಡಲಾಗಿದೆ. ಎಸ್‌ಟಿ ಸಮುದಾಯದ ನಿರುದ್ಯೋಗಿಗಳಿಗೆ ಉದ್ಯಮಶೀಲತಾ ಯೋಜನೆಯಡಿ ನಾಲ್ಕು ಲಕ್ಷ ರೂ. ಸಹಾಯಧನ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ರೂ. ಕೃಷಿ ಸಾಲ, ಹಸು, ಎಮ್ಮೆ ಖರೀದಿಸಲು 40 ಸಾವಿರ ರೂ. ಪ್ರೋತ್ಸಾಹಧನ, ರೈತರ ಆದಾಯ ವೃದ್ಧಿಗೆ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಕೃಷಿ ಮತ್ತು ತೋಟಗಾರಿಕೆಗೆ 8,373 ಕೋಟಿ ರೂ. ಹಾಗೂ ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ 4,084 ಕೋಟಿ ರೂ. ಮೀಸಲಿಟ್ಟಿರುವುದು ರೈತಪರ ಬಜೆಟ್ ಎಂಬುವುದನ್ನು ನಿರೂಪಿಸುತ್ತದೆ ಎಂದು ದ. ಕ ಜಿಲ್ಲಾ ಕೆ ಡಿ ಪಿ ಯ ಸರಕಾರದ ನಾಮ ನಿರ್ದೇಶಿತ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲಾ ಹೇಳಿಕೆ ನೀಡಿರುತ್ತಾರೆ

Related posts

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya
error: Content is protected !!