March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಉಮಂಗ್- 2026’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ: ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

ಉಜಿರೆ: ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕಾಲೇಜಿನ ಹಿಂದಿ ವಿಭಾಗವು ಆಯೋಜಿಸಿದ ಉಮಂಗ್- 2026′ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 10 ವಿದ್ಯಾರ್ಥಿಗಳ ತಂಡವು 5 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಉತ್ಸವದಲ್ಲಿ ರಾಜ್ಯ ಮಟ್ಟದ ರನ್ನರ್ ಆಫ್ ಚಾಂಪಿಯನ್ಸ್ ಗಳಾಗಿ ಹೊರ ಹೊಮ್ಮಿದ್ದಾರೆ.

ರಾಜ್ಯ ಮಟ್ಟದ ಉಮಂಗ್- 2026 ಸಾಂಸ್ಕೃತಿಕ ಉತ್ಸವದಲ್ಲಿ ಒಟ್ಟು 10ಕ್ಕೂ ಹೆಚ್ಚು ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಉಜಿರೆಯ ಎಸ್.ಡಿ.ಎಂ ತಂಡವನ್ನು ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರುತಿ ಮಣಕೀಕರ್ ನೇತೃತ್ವವನ್ನು ವಹಿಸಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಂಗಳೂರು – ಬ್ಯಾಂಕ್ ಆಫ್ ಬರೋಡಾ ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ.ಪಿ.ಬಾಲಮುರುಗನ್ ಉದ್ಘಾಟಿಸಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬ್ಯಾಂಕ್ ಆಫ್ ಬರೋಡಾ ಮೂಡುಬಿದಿರೆ ಶಾಖೆಯ ಹಿರಿಯ ವ್ಯವಸ್ಥಾಪಕ ಪ್ರಭು ಕುಮಾರ್, ಹಿಂದಿ ವಿಭಾಗದ ಮುಖ್ಯಸ್ಥ ಡಾ. ದತ್ತಾತ್ರೇಯ ಹೆಗಡೆ , ವಿಧ್ಯಾರ್ಥಿ ಪ್ರತಿನಿಧಿಗಳು ಮತ್ತಿತರು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಸಂಸ್ಥೆಯ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ, ವಿದ್ಯಾರ್ಥಿ ಸಮೂಹ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.

ಪ್ರಶಸ್ತಿಗಳ ವಿವರ: ನೃತ್ಯ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ತಂಡವು ಪ್ರಥಮ ಬಹುಮಾನ ಪಡೆದು ತಂಡದಲ್ಲಿ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಂಜುನಾಥ್, ಪ್ರಾಪ್ತ ಹೆಗಡೆ , ಸೃಷ್ಟಿ ಜೈನ್, ಶ್ರೀಪ್ರಜ್ಞಾ ಹಾಗು ಬಿಸಿಎ ವಿದ್ಯಾರ್ಥಿಗಳಾದ ಹರ್ಷಿತಾ, ಪ್ರಗತಿ, ಮತ್ತು ಅನುಶ್ರೀ ಭಾಗವಹಿಸಿದ್ದರು.
ಚರ್ಚಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ತಂಡವು ದ್ವಿತೀಯ ಬಹುಮಾನ ಪಡೆದು ತಂಡದಲ್ಲಿ ಬಿಕಾಂ ವಿದ್ಯಾರ್ಥಿಗಳಾದ
ಧಾರಿಣಿ ಮತ್ತು ಸೃಷ್ಟಿ ಜೈನ್ ಭಾಗವಹಿಸಿದ್ದರು.
ರೀಲ್ ಟು ರಿಯಲ್ ವಿದ್ಯಾರ್ಥಿಗಳ ತಂಡವು ದ್ವಿತೀಯ ಬಹುಮಾನ ಪಡೆದು ತಂಡದಲ್ಲಿ ಬಿಕಾಂ ವಿದ್ಯಾರ್ಥಿಗಳಾದ
ಸೃಷ್ಟಿ ಜೈನ್ ಮತ್ತು ಶ್ರೀಪ್ರಜ್ಞಾ ಪಾಲ್ಗೊಂಡಿದ್ದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಜೇನು ಕೃಷಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
error: Content is protected !!