September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

ಕೊಕ್ಕಡ: ಕೊಕ್ಕಡ ಸಮೀಪದ ಜೋಡುಮಾರ್ಗ ಬಳಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಮಾ.6ರಂದು ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಮೃತರನ್ನು ಕೊಕ್ಕಡ ಗ್ರಾಮದ ಮುಂಡೂರುಪಳಿಕೆಯ ಬದಿಜಾಲು ನಿವಾಸಿ ಶಾಂತಪ್ಪ ಗೌಡ (43) ಎಂದು ಗುರುತಿಸಲಾಗಿದೆ. ಅವರು ಕಳೆದ ಎರಡು ವರ್ಷಗಳಿಂದ ಕೊಕ್ಕಡ ಸಮೀಪದ ಜೋಡುಮಾರ್ಗ ಪ್ರದೇಶದಲ್ಲಿ ವಾಹನಗಳ ಸರ್ವಿಸ್ ಸ್ಟೇಷನ್ ನಡೆಸಿಕೊಂಡು ಬರುತ್ತಿದ್ದರು ಎಂದು ತಿಳಿದುಬಂದಿದೆ.

ಮಾ .6 ರಂದು ಮನೆಯ ಸಮೀಪವೇ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!