33.4 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ ಮೂಡುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಸರಿಯಾದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಸ್ತುತ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ (Talent Test) ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಮಾರ್ಚ್ 8ರಿಂದ ಮಾರ್ಚ್ 11ರವರೆಗೆ ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ತಮ್ಮ ಅನುಕೂಲಕರ ದಿನಗಳಲ್ಲಿ ಬಂದು ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಸಲುವಾಗಿ ನಾಲ್ಕು ದಿನಗಳ ಕಾಲ ಪರೀಕ್ಷೆಯನ್ನು ಆಯೋಜಿಸಲಾಗಿದೆ.

ಪರೀಕ್ಷೆಗೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಪ್ರತಿದಿನ ಬೆಳಗ್ಗೆ 10.00 ರಿಂದ 11.10 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.40 ರವರೆಗೆ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಕ್ಯಾಂಪಸ್‌ನಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳು (Multiple Choice Questions) ಇರುತ್ತವೆ. ವಿಜ್ಞಾನ (Science) ವಿಭಾಗದಿಂದ 30 ಪ್ರಶ್ನೆಗಳು ಹಾಗೂ ಗಣಿತ (Mathematics) ವಿಭಾಗದಿಂದ 30 ಪ್ರಶ್ನೆಗಳು, ಒಟ್ಟು 60 ಪ್ರಶ್ನೆಗಳಿರಲಿದೆ. ಪರೀಕ್ಷೆಯ ಅವಧಿ 70 ನಿಮಿಷಗಳು ಆಗಿರುತ್ತದೆ. ಈ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಒದಗಿಸಲಿದೆ.

ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ವಿಶೇಷ ಬಹುಮಾನವಾಗಿ ಲ್ಯಾಪ್‌ಟಾಪ್ ನೀಡಲಾಗುವುದು. ಗಮನಾರ್ಹ ಸಾಧನೆ ಮಾಡಿದ ವಿಜೇತರಿಗೆ ಟ್ಯಾಬ್‌ಗಳು ಬಹುಮಾನವಾಗಿ ನೀಡಲಾಗುತ್ತದೆ. ಜೊತೆಗೆ, ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪಿಯು ದಾಖಲಾತಿ ಸಂಪೂರ್ಣ ಉಚಿತವಾಗಿದ್ದು, ಶೇಖಡಾ 75 ಕ್ಕಿಂತ ಅಧಿಕ ಹಾಗೂ ಶೇಖಡಾ 50 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪಿಯು ದಾಖಲಾತಿಯಲ್ಲಿ ವಿಶೇಷ ರಿಯಾಯಿತಿ ನೀಡಲಾಗುವುದು. ನೋಂದಣಿಗಾಗಿ ಇಂದೇ 7618775600 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!