ಬೆಳ್ತಂಗಡಿ: ಶಾಲೆ ಆರಂಭಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಣ ಇಲಾಖೆಗೆ ಸಲ್ಲಿಸಿದೆ ಎಂಬ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕುವೆಟ್ಟು ಗ್ರಾಮದ ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿರುವ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಮೂವರ ವಿರುದ್ದ ಪ್ರಕರಣ ದಾಖಲಾಗಿದ್ದು ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಶಶಿಧರ ಜಿ. ಎಸ್, ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ದ.ಕ ಮಂಗಳೂರು ಇವರು ನೀಡಿದ ದೂರಿನ ಮೇರೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಾ.6 ರಂದು ಸಂಜೆ ನಾಲ್ವರ ವಿರುದ್ಧ BNS -2023 (u/s-318(2),336(3)337,340(2),r/w3(5)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.











