24.4 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ ರೋಟರಿ ಕ್ಲಬ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ(ರಿ), ಸ್ತ್ರೀ ಶಕ್ತಿ ಬ್ಲೋಕ್ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ಮಾ. 8 ರಂದು ರೋಟರೀ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಛಾಟಕರಾದ ರೋಟರಿ ಕ್ಲಬ್ ನ ಮಾಜಿ ಕಾರ್ಯದರ್ಶಿ ಶ್ರೀಮತಿ ರಕ್ಷಾ ರಾಘ್ನೇಶ್ ರವರು ಕಾರ್ಯಕ್ರಮವನ್ನು ಉದ್ಛಾಟಿಸಿ, ವಿಶ್ವ ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮುಖ್ಯಾಧಿಕಾರಿ ಶ್ರೀಮತಿ ಪ್ರಿಯಾ ಆ್ಯಗ್ನೆಸ್ ಅವರು ಮಹಿಳೆಯರಿಗೆ ದೊರೆಯುವ ಸೌಲಭ್ಯದ ಕುರಿತು ತಿಳಿಸಿದರು ಮಾತ್ರವಲ್ಲ ಮಹಿಳೆಯರ ಸುರಕ್ಷತೆಗೆ ಬೇಕಾದ ಅಗತ್ಯ ಮಾಹಿತಿಗಳನ್ನು ನೀಡಿದರು.

ಡಾ| ಎಂ ಎಂ ದಯಾಕರ್ ಮಾತನಾಡಿ, ಸಮಾಜದಲ್ಲಿ ಗಂಡು ಹಾಗೂ ಹೆಣ್ಣು ಇಬ್ಬರೂ ಸಮಾನ ಗೌರವಕ್ಕೆ ಪಾತ್ರರು. ಇಂತಹ ಕಾರ್ಯಕ್ರಮಕ್ಕೆ ಗಂಡಸರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ಅವಶ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋಟರಿ ಕ್ಲಬ್ ಅಧ್ಯಕ್ಷ ಡಾ ಪ್ರಕಾಶ ಪ್ರಭು ಅವರು ಮಹಿಳೆಯರು ಇಂದು ಹೊರಗೆ ದುಡಿಯುತ್ತಿದ್ದರೂ , ಮನೆ, ಗಂಡ ಹಾಗೂ ಮಕ್ಕಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಮನೆ ಕೆಲಸದಲ್ಲಿ ಸಹಾಯ ಮಾಡುವುದು ಒಂದರ್ಥದಲ್ಲಿ ಗಂಡಂದಿರು ತಮ್ಮ ಪತ್ನಿಯಂದಿರಿಗೆ ಗೌರವ ಕೊಟ್ಟ ಹಾಗೆ ಎಂದರು.

ಆ್ಯನ್ ಡಾ ಅನಿತಾ ದಯಾಕರ್ ಮತ್ತು ಆ್ಯನ್ ಆಶಾ ಪಿದಮಲೆ ನಿರೂಪಿಸಿದರು. ಶ್ರೀಮತಿ ಸೌಮ್ಯ ಪ್ರಾರ್ಥಿಸಿದರು. ಶ್ರೀಮತಿ ನಿಶಾ ಯಶವಂತ ಧನ್ಯವಾದ ಸಮರ್ಪಿಸಿದರು.
ಸಭಾ ಕಾರ್ಯಕ್ರಮದ ನಂತರ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ರೊ. ರೇಷ್ಮಾ ಹೆಗ್ಡೆ ನಡೆಸಿಕೊಟ್ಟರು.

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!