ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

ಬೆಳಾಲು:ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ಬೆಳಾಲು ಗುತ್ತು ಮನೆಯ ಜೀವಂಧರ್ ಕುಮಾರ್ ಜೈನ್ ಮತ್ತು ಡಿ.ಪಿ. ಸದಸ್ಯ ಪ್ರವೀಣ್ ಎಸ್.ಎಲ್. ಇವರ ಸ್ಮರಣಾರ್ಥ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಶಿಯೇಶನ್ ಇದರ ಸಹಯೋಗದೊಂದಿಗೆ 11ನೇ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟವು ಮಾ.7ರಂದು ಬೆಳಾಲು ದೊಂಪದಪಲ್ಕೆಯಲ್ಲಿ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಮಾರ್ಗದರ್ಶಕರಾದ ಹೇಮಾವತಿ ಜೀವಂಧರ್‌ ಜೈನ್ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್‌ ಪೂಂಜ ವಹಿಸಿದ್ದರು.

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಹರೀಶ್ ಆರಿಕೋಡಿ ದೀಪ ಪ್ರಜ್ವಲನೆ ನೆರವೇರಿಸಿದರು. ಅರಸಿನಮಕ್ಕಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಸಂಜೀವ ಕ್ರೀಡಾಂಗಣವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ , ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್, ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತ ಬಂಗೇರ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ., ಉದ್ಯಮಿ ಜಯಣ್ಣ ಗೌಡ, ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಸುದ್ದಿ ಉದಯ ವಾರಪತ್ರಿಕೆ ಉಪಸಂಪಾದಕ ಸಂತೋಷ್ ಪಿ. ಕೋಟ್ಯಾನ್, ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ, ಡಿಪಿ ಸ್ಫೋರ್ಟ್ಸ್ ಕ್ಲಬ್ ಅಧ್ಯಕ್ಷ ದಿನೇಶ್ ಗೌಡ ಉಪಸ್ಥಿತರಿದ್ದರು.

ಸಮಾರೋಪದ ಅಧ್ಯಕ್ಷತೆಯನ್ನು ಡಿಪಿ ಸ್ಫೋರ್ಟ್ಸ್ ಕ್ಲಬ್‌ ಅಧ್ಯಕ್ಷ ದಿನೇಶ್ ಗೌಡ ವಹಿಸಿದ್ದರು.

ಅತಿಥಿಗಳಾಗಿ ತಾಲೂಕು ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ ಬನಂದೂರು, ಬೆಳಾಲು ಸೇವಾ ಸಹಕಾರಿ ಬ್ಯಾಂಕ್‌ ಉಪಾಧ್ಯಕ್ಷ ದಿನೇಶ್‌ ಕೋಟ್ಯಾನ್‌ , ವಕೀಲ ಶ್ರೀನಿವಾಸ ಗೌಡ, ಸಿವಿಲ್ ಇಂಜಿನಿಯರ್ ಮೋಹನ್ ಗೌಡ ವಚ್ಚ, ಕೃಷ್ಣ ಕ್ಲಿನಿಕ್ ವೈದ್ಯ ಡಾ| ಚೇತನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ವಿಜಯ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ಲಕ್ಷ್ಮಣ ಗೌಡ ಪುಳಿತ್ತಡಿ, ಕು. ಮನಶ್ರೀ, ಕು. ದೀಕ್ಷಿತಾ, ಕು. ಇಂದುಮತಿ ಇವರುಗಳನ್ನು ಸನ್ಮಾನಿಸಲಾಯಿತು.

ಯಶವಂತ್ ಬೆಳಾಲು ಸ್ವಾಗತಿಸಿ, ಲೋಹಿತ್ ಕುಮಾರ್ ವಂದಿಸಿ, ಬೆಳಿಯಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು. ಡಿಪಿ ಸ್ಫೋರ್ಟ್ಸ್ ಕ್ಲಬ್‌ ಸದಸ್ಯರು ಸಹಕರಿಸಿದರು.

Related posts

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!