September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಸುವರ್ಣ ಸಂಭ್ರಮ 2026 ಚಾಲನೆಯೊಂದಿಗೆ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಮಾ.15ರಂದು ಅಳದಂಗಡಿ ಕಟ್ಟೂರು ಶಂಕರ್ ಭಟ್ ರವರ ತೋಟದಲ್ಲಿ ನಡೆಯಲಿರುವುದು ಎಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್‌ ಪೂಂಜ ನೆರವೇರಿಸಲಿದ್ದಾರೆ.ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಕುಶಾಲಪ್ಪ ಗೌಡ ಸುವರ್ಣ ಸಂಭ್ರಮದ ಲೋಗೊ ಅನಾವರಣಗೊಳಿಸಲಿದ್ದಾರೆ. ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್‌ ಕುಮಾರ್ ಕಾಫಿ ಗಿಡ ವಿತರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ. ರಘು, ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ., ಪ್ರಗತಿಪರ ಕೃಷಿಕ ಶಂಕರ ಭಟ್‌ ಕಟ್ಟೂರು ಭಾಗವಹಿಸಲಿದ್ದಾರೆ.

ಐ.ಸಿ.ಎ.ಆರ್ ನಿವೃತ್ತ ಹಿರಿಯ ವಿಜ್ಞಾನಿ ಡಾ. ವೇಣುಗೋಪಾಲ್ ಕಾಳುಮೆಣಸು ನಾಟಿ, ಪೋಷಣೆ, ರೋಗ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ದ.ಕ. ಜಿಲ್ಲಾ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರ ಅಜಿತ್‌ ಪ್ರಸಾದ್ ರೈ ಕಾಯರ್ತಡಿ ದ.ಕ. ಜಿಲ್ಲೆಯಲ್ಲಿ ಅಡಿಕೆಗೆ ಪರ್ಯಾಯ ಹಾಗೂ ಮಿಶ್ರ ಬೆಳೆಯಾಗಿ ಲಾಭಾದಾಯಕ ಕಾಫಿ ಕೃಷಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಗತಿಪರ ಕೃಷಿಕ ಅನಂತಕೃಷ್ಣ ಪಳ್ಳತ್ತಡ್ಕ ನೀರಾವರಿ, ಆಟೋಮೇಟಿಕ್ ಇರಿಗೇಷನ್ ಮತ್ತು ಫಟಿಗೇಷನ್ ಸಿಸ್ಟಂ ಬಗ್ಗೆ ತಿಳಿಸಲಿದ್ದಾರೆ ಎಂದರು.

Related posts

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya
error: Content is protected !!