37.3 C
ಪುತ್ತೂರು, ಬೆಳ್ತಂಗಡಿ
March 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

ಬೆಳ್ತಂಗಡಿ: ಜನರು ವಿದ್ಯಾವಂತರು , ಬುದ್ದಿವಂತರು ಆದಷ್ಟು ನಾಗರಿಕ ಸಮಾಜದಲ್ಲಿ ಅನಾಗರಿಕರಂತೆ ವರ್ತನೆ ಹೆಚ್ಚುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ನಾವೂರು ಗ್ರಾಮದ ಕೈಕಂಬ ಸೇತುವೆ. ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ ನದಿ ನೀರಿಗೆ ಸುರಿಯುವುದು ಇಲ್ಲಿ ಮಾಮೂಲು ಆಗಿದೆ.

ಸ್ಥಳೀಯವಾಗಿ ನಡೆಯುವ ಕಾರ್ಯಕ್ರಮದಲ್ಲಿ ಉಪಯೋಗಿಸುವ ಪ್ಲಾಸ್ಟಿಕ್ , ಹಾಳೆ ತಟ್ಟೆಗಳು , ಪ್ಲಾಸ್ಟಿಕ್ ಚೀಲಗಳು , ಬಾಟಲ್ ಗಳು , ಲೋಟಗಳು , ಬಿಯರ್ ಬಾಟಲ್ ಗಳು , ಮಹಿಳೆಯರು ಬಳಸುವ ಪ್ಯಾಡ್ , ಮಕ್ಕಳು ಮತ್ತು ಹಾಸಿಗೆ ಹಿಡಿದಿರುವವರ ಪ್ಯಾಂಪರ್ಸ್ ಸೇರಿದಂತೆ ಸೆಲೂನ್ ಗಳಲ್ಲಿ ಕತ್ತರಿಸಿದ ತಲೆಗೂದಲನ್ನು ಗೋಣಿಯಲ್ಲಿ ತಂದು ಇಲ್ಲಿ ಸುರಿಯುತ್ತಾರೆ. ಒಟ್ಟಾರೆಯಾಗಿ ಕೈಕಂಬ ಸೇತುವೆಯ ನದಿ ತೀರ ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಗೊಳ್ಳುತ್ತಿದೆಯೇ ಎಂಬ ಸಂಶಯ ಉಂಟಾಗುವಂತಿದೆ.

ಸ್ವಚ್ಛ ಭಾರತ ಸೇರಿದಂತೆ ಹತ್ತಾರು ಕಾನೂನು , ಯೋಜನೆಗಳು ಜಾರಿಯಲ್ಲಿದ್ದರೂ ಗಾಂಧಿ ಜಯಂತಿಯಂದು ಮಾತ್ರ ಒಂದು ದಿನಕ್ಕೆ ಸ್ವಚ್ಚತಾ ಕಾರ್ಯ ಸೀಮಿತವಾಗಿದೆ. ಗ್ರಾಮ ಪಂಚಾಯತ್ ಗಳು ಸ್ವಚ್ಚತೆಗಾಗಿ ವರ್ಷಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ನಮ್ಮ ವಿದ್ಯಾವಂತ, ಬುದ್ದಿವಂತ ಜನರು ಮಾತ್ರ ತ್ಯಾಜ್ಯಗಳನ್ನು ನದಿ, ಸೇತುವೆ, ರಸ್ತೆ ಬದಿಯಲ್ಲಿ ಎಸೆಯುತ್ತಾ ಸ್ವಚ್ಛತೆಗೆ ಸವಾಲು ಹಾಕುವ ನೀಚತನ ಪ್ರದರ್ಶಿಸುತ್ತಾರೆ. ಗ್ರಾಮ ಪಂಚಾಯತ್ ಗಳು ಕಸ ಬಿಸಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಅಗತ್ಯವಿರುವ ಕಡೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಮಾತ್ರ ಸ್ವಚ್ಛ ಭಾರತ ಪರಿಕಲ್ಪನೆ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾಧ್ಯ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!