September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಸಮಸ್ಯೆ

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

ಶಿಶಿಲ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಸರ್ಪಗಳ ಓಡಾಟ ಹೆಚ್ಚಾಗುತ್ತಿರುವ ಹಿನ್ನೆಲೆ ಹಾವು ಕಡಿತದಿಂದ ಕಾರೆಗುಡ್ಡೆ ನಿವಾಸಿ ಚೋಮ (67) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾ.3ರಂದು ಶಿಶಿಲ ಗ್ರಾಮದ ಕಾರೆಗುಡ್ಡೆ ನಿವಾಸಿ ಚೋಮ ಅವರು ತಮ್ಮ ತೋಟದಲ್ಲಿ ಬಾಳೆ ಗಿಡಕ್ಕೆ ಮಣ್ಣು ಹಾಕುತ್ತಿದ್ದ ವೇಳೆ ನಾಗರಹಾವು ಕಡಿದಿತ್ತು. ತಕ್ಷಣ ಅವರನ್ನು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ. 8ರಂದು ನಿಧನರಾದರು.

ಮೃತರು ಪತ್ನಿ ಲಲಿತ, ಪುತ್ರಿ ಅಶ್ವಿತಾ, ಕುಟುಂಬಸ್ಥರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಗ್ರಾಮದಲ್ಲಿ ವಿಷಸರ್ಪಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಇಲಾಖೆ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

Related posts

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪದವಿಪೂರ್ವ ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya
error: Content is protected !!