37.3 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಮಾ7ರಂದು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಪೋಷಕರ ಸಭೆಯನ್ನು ನಡೆಯಿತು.

ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಸಫಾನ ಮಾತನಾಡಿ ಮಕ್ಕಳನ್ನು ಮೊಬೈಲಿಂದ ದೂರವಿರಿಸಲು ಪೋಷಕರ ಸಹಕಾರ ಅಗತ್ಯ ಡ್ರಗ್ಸ್ ಧೂಮಪಾನ ಗಳಿಂದ ಎಚ್ಚರ ವಹಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿ ನೋಡಲ್ ಅಧಿಕಾರಿ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ರಾಜೀವ ಸಾಲಿಯನ್ ಮಾತನಾಡಿ ಪೋಷಕರೊಂದಿಗೆ ಉತ್ತಮ ಸಂವಾದ ಶಾಲೆ ಮತ್ತು ಸಮುದಾಯದಲ್ಲಿ ಪೋಷಕರ ಸಹಭಾಗಿತ್ವ, ವಿವಿಧ ಅನುದಾನಗಳ ಸದ್ಬಳಕೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮದ್ದಡ್ಕ, ಉಪಾಧ್ಯಕ್ಷರು ನಸೀಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್, ಕಾರ್ಯದರ್ಶಿ ಸತೀಶ್ ದೇವಾಡಿಗ ಉಪಸ್ಥಿತರಿದ್ದರು.

ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ವರದಿ ಮಂಡಿಸಿದರು. ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಕಾರ್ಯಕ್ರಮ ನಿರೂಪಿಸಿದರು. ನಯನಾ.ಟಿ ಧನ್ಯವಾದ ನೀಡಿದರು. ಸಹಶಿಕ್ಷಕರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya
error: Content is protected !!