36.7 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

2025-26ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯು ಅಕೊಲೆಡ್ಸ್ ತರಗತಿಗಳನ್ನು ನಡೆಸಿದ್ದು, ಆ ತರಗತಿಗಳಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಅಧ್ಯಕ್ಷ ಕೃಷ್ಣಪ್ರಸಾದ್ ಅಡಪ್ಪ, ಕಾರ್ಯಕ್ರಮ ಸಂಯೋಜಕಿ ನೀತು ಪ್ರಸಾದ್, ಶಿಕ್ಷಕಿ ಮಧುರ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ವಿನೀತ, ಅನುಷಾ, ಪ್ರಗ್ನ್ಯ ಹಾಗೂ ಸಂಜನಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ವಹಿಸಿದ್ದರು.

Related posts

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!