37.4 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜು, ಕಕ್ಯಪದವುದಲ್ಲಿ ಪದವಿ ವಿಭಾಗದ ವಿದ್ಯಾರ್ಥಿನಿಯರಿಗಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾ.9ರಂದು ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾದ ಪಿಯುಸಿ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಚೈತ್ರ ತಮ್ಮ ಉಪನ್ಯಾಸದಲ್ಲಿ ಮಹಿಳೆಯರ ಶಿಕ್ಷಣದ ಮಹತ್ವ, ಸ್ವಾವಲಂಬನೆ ಮತ್ತು ಆತ್ಮವಿಶ್ವಾಸದ ಅಗತ್ಯತೆಯ ಕುರಿತು ವಿದ್ಯಾರ್ಥಿನಿಯರಿಗೆ ಪ್ರೇರಣಾದಾಯಕವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಸಹ ವಿದ್ಯಾರ್ಥಿನಿಯರಿಗೆ ತಿಳಿಸಿದರು. ಇಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಅನುಭವಿಸುವ ಒತ್ತಡ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮಾನಸಿಕವಾಗಿ ಸದೃಢರಾಗಿರುವುದು ಅತ್ಯಂತ ಅಗತ್ಯವೆಂದು ಹೇಳಿದರು. ಧನಾತ್ಮಕ ಚಿಂತನೆ, ಉತ್ತಮ ಸ್ನೇಹ ಸಂಬಂಧಗಳು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ ಎಂದು ಅವರು ತಿಳಿಸಿದರು

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಜೋಸ್ಟಾನ್ ಲೋಬೋ, ಸಂಯೋಜಕ ಯಶವಂತ ಜಿ . ನಾಯಕ್, ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಶೆಟ್ಟಿ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!