37.4 C
ಪುತ್ತೂರು, ಬೆಳ್ತಂಗಡಿ
March 10, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ಕ್ರೀಡಾಕೂಟವನ್ನು ಮಾ.6ರಂದು ನಡೆಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್.ವಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ, ಸರಕಾರಿ ಪ್ರೌಢಶಾಲೆ ಗುರುವಾಯನಕೆರೆಯ ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್ ಮಾತನಾಡಿ ಕ್ರೀಡೆಯ ಮಹತ್ವವನ್ನು ತಿಳಿಸುತ್ತಾ “ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಯು ಅತ್ಯವಶ್ಯಕ” ಎಂದು ತಿಳಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ. , IQAC ಸಂಚಾಲಕ ಡಾ. ಕುಶಾಲಪ್ಪ ಎಸ್. , ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ರವಿ ಎಂ. ಏನ್. , ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಧಾಕೃಷ್ಣ ಹೆಚ್. ಬಿ. ಹಾಗೂ ವಿದ್ಯಾರ್ಥಿ ಕ್ರೀಡಾ ಪ್ರತಿನಿಧಿಗಳಾದ ವಿಘ್ನೇಶ್ ದ್ವಿತೀಯ ಎಂ.ಎ, ಹೇಮಂತ್ ತೃತೀಯ ಬಿ.ಎ, ಮಂಜುಳಾ ತೃತೀಯ ಬಿ.ಕಾಂ., ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಪಥಸಂಚಲನವನ್ನು ನಿರ್ವಹಣಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದಿವ್ಯ ಪ್ರಭು ನಡೆಸಿದರು. ವೀಕ್ಷಿತಾ ಸ್ವಾಗತಿಸಿ, ದೀಪಾ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಸುಪ್ರಿಯಾ ಧನ್ಯವಾದವಿತ್ತರು, ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು

Related posts

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya
error: Content is protected !!