37.4 C
ಪುತ್ತೂರು, ಬೆಳ್ತಂಗಡಿ
March 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

ಬೆಳ್ತಂಗಡಿ: ತಾಲೂಕಿನ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಶಿಶಿಲ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಿಶಿಲ ಗ್ರಾಮದಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ಮೂವರಿಗೆ ಹಾವು ಕಡಿದ ಘಟನೆ ನಡೆದಿದ್ದು, ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದೆ ಚಿಕಿತ್ಸೆಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಈ ರೀತಿಯ ದುರ್ಘಟನೆಗಳಿಗೆ ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ದೊರೆಯದಿರುವುದೇ ಪ್ರಮುಖ ಕಾರಣವಾಗುತ್ತಿದೆ ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಸಂದರ್ಭಗಳಲ್ಲಿ ಸಮೀಪದಲ್ಲೇ ಅಗತ್ಯ ಚಿಕಿತ್ಸೆ ಲಭ್ಯವಿಲ್ಲದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಆದ್ದರಿಂದ ಆರೋಗ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಉಪ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಹಾಗೂ ವಿಷಕಾರಿ ಹಾವುಗಳ ಕಡಿತಕ್ಕೆ ಒಳಗಾದವರಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಕರುಣಾಕರ ಶಿಶಿಲ ಅವರು ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya
error: Content is protected !!