28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

ಗುರುವಾಯನಕೆರೆ:ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ- ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು.

ಅವರು ಗುರುವಾಯನಕೆರೆ ವಿದ್ಯಾ ಸಾಗರ ಕ್ಯಾಂಪಸ್ ನ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಕಿಂಡರ್‌ಗಾರ್ಡನ್‌ (K.G) ಮಕ್ಕಳ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಲಿಕೆ ಹೊರೆಯಾಗದೆ, ಸಂತೋಷದಿಂದ ಅಭ್ಯಾಸ ಮಾಡುವಂಥ ವಾತಾವರಣ ಶಾಲೆಗಳಲ್ಲಿ ಇರಬೇಕು. ಹಾಗಾಗಿ ನಮ್ಮ ಶಾಲೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಕೂಡಾ ನಿರಂತರವಾಗಿ ಹಮ್ಮಿ ಕೊಳ್ಳುತ್ತಾ ಬಂದಿದ್ದೇವೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಸಂಸ್ಥೆಯ ಆಡಳಿತಾಧಿಕಾರಿಯಾದ ಕೀರ್ತಿ ನಿಧಿ ಜೈನ್ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕಿಯಾದ ಸಹನಾ ಜೈನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿ, ಸಹ ಶಿಕ್ಷಕಿಯಾದ ಸ್ವಾತಿ ಅತಿಥಿಗಳನ್ನು ಸ್ವಾಗತಿಸಿ, ಶಿಕ್ಷಕಿ ಪವಿತ್ರ ಕೋಟ್ಯಾನ್ ವಂದಿಸಿದರು.ಸಮಾರಂಭದಲ್ಲಿ ವಿದ್ಯಾರ್ಥಿಗಳ ಹೆಸರನ್ನು ಶಿಕ್ಷಕಿ ಗೀತಾ ಓದಿ, ಮಕ್ಕಳನ್ನು ವೇದಿಕೆಗೆ ಆಹ್ವಾನಿಸಿದರು. ಶಿಕ್ಷಕಿ ಚೇತನಾ ಸಹಕರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ: ವಿದ್ಯಾರ್ಥಿಗಳು ವೇದಿಕೆಗೆ ಬಂದು ಅಧ್ಯಕ್ಷರಿಂದ ತಮ್ಮ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು. ಎಕ್ಸೆಲ್ ಸಂಸ್ಥೆಯ ಅಧ್ಯಕ್ಷರು ಎಲ್ಲಾ ಕೆಜಿ ವಿದ್ಯಾರ್ಥಿಗಳಿಗೆ ಕಂಚಿನ ದೀಪವನ್ನು ನೀಡಿ ಶುಭ ಹಾರೈಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಸೆ.14: ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಹಗ್ಗಜಗ್ಗಾಟ, ಕಬಡ್ಡಿ, ತ್ರೋಬಾಲ್ ಸ್ಫರ್ಧೆಗಳಿಗೆ ಹೆಸರು ನೋಂದವಣಿಗೆ ಸೆ.10 ಕೊನೆ ದಿನ

Suddi Udaya
error: Content is protected !!