24 C
ಪುತ್ತೂರು, ಬೆಳ್ತಂಗಡಿ
July 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯನ್ನು ಮಾ.8ರಂದು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆಯಲ್ಲಿ ಸ್ಟಾಫ್ ನರ್ಸ್ ವಿದ್ಯಾ ಮಾತನಾಡಿ ಪ್ರಸ್ತುತ ದಿನಗಳಲ್ಲಿ ನಡೆಯುವಂತಹ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗದೆ ತಮ್ಮ ಜೀವನವನ್ನು ಉತ್ತಮ ರೀತಿಯಾಗಿ ಸಾಗಿಸಬೇಕು ಹಾಗೂ ವಿದ್ಯಾರ್ಥಿನಿಗಳಿಗೆ ಹದಿಹರೆಯದ ಆರೋಗ್ಯ ಸಮಸ್ಯೆ, ಸವಾಲುಗಳು, ಮುಟ್ಟಿನ ಸಮಯದಲ್ಲಿ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು, ಶುಚಿತ್ವ ಮತ್ತು ರಕ್ತಹೀನತೆ ಕುರಿತು ಉಪನ್ಯಾಸ ನೀಡಿದರು.

ವಿವಿಧ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಗಳನ್ನು ನೃತ್ಯದ ಮೂಲಕ ವಿದ್ಯಾರ್ಥಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಷ್ಟನ್ ಲೋಬೋ, ಮುಖ್ಯ ಶಿಕ್ಷಕಿ ವಿಜಯ ಕೆ., ಸಂಯೋಜಕ ಯಶವಂತ ಜಿ ನಾಯಕ್ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರೌಢ ವಿಭಾಗದ ಸಹ ಶಿಕ್ಷಕಿ ದಿವ್ಯಶೀ ಕಾರ್ಯಕ್ರಮ ನಿರೂಪಿಸಿದರು.

Related posts

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya
error: Content is protected !!